ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗಾಗಿ ಹೆಲ್ಪ್ ಲೈನ್ ಪ್ರಾರಂಭ

1 min read

ತುಮಕೂರು ನ್ಯೂಸ್.ಇನ್(ಜೂ.16):
ತುಮಕೂರು ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕರ ಕಛೇರಿಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗಾಗಿ ಸಹಾಯವಾಣಿ ಪ್ರಾರಂಭಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ. ಜಿಲ್ಲೆಯಲ್ಲಿ ಜೂನ್ 25 ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಗೊಂದಲ ನಿವಾರಿಸುವುದು ಹಾಗೂ ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸುವಂತೆ ಆತ್ಮವಿಶ್ವಾಸ ತುಂಬುವುದು ಸಹಾಯವಾಣಿಯ ಉದ್ದೇಶವಾಗಿದೆ. ಕೋವಿಡ್ 19ರ ಸೋಂಕಿನ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಚಿತ್ರಣ, ಸಾರಿಗೆ ವ್ಯವಸ್ಥೆ, ಪರೀಕ್ಷಾ ಕೇಂದ್ರದಲ್ಲಿ ಕೈಗೊಂಡಿರುವ ಕ್ರಮಗಳು, ವಲಸೆ ಕಾರ್ಮಿಕ ಮಕ್ಕಳು, ವಸತಿ ಶಾಲೆಯ ಮಕ್ಕಳು, ವಿದ್ಯಾರ್ಥಿ ನಿಲಯದ ಮಕ್ಕಳು ಹತ್ತಿರದಲ್ಲಿರುವ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಬಯಸಿದಲ್ಲಿ ಅವಕಾಶ ಪಡೆಯುವ, ಪ್ರವೇಶ ಪತ್ರ ಸೇರಿದಂತೆ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ಸಂದೇಹ, ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಉಪನಿರ್ದೇಶಕರ ಕಛೇರಿಯ ಲ್ಯಾಂಡ್ ಲೈನ್ ಸಂಖ್ಯೆ 0816 2278444, ಶಿಕ್ಷಣಾಧಿಕಾರಿ ರಂಗದಾಸಪ್ಪ ಅವರ ಮೊ.ಸಂ. 9449126869, ವಿಷಯ ಪರೀಕ್ಷಕರಾದ ಹೆಚ್.ಜಿ. ಗಿರೀಶ್ ಅವರ ಮೊ.ಸಂ. 9731619985, ಮಧುಗಿರಿ ಸಾರ್ವಜನಿಕ ಶಿಕ್ಷಣ ಇಲಾಖೆ ದೂರವಾಣಿ ಸಂ. 0817 283477 ಹಾಗೂ ಶಿಕ್ಷಣಾಧಿಕಾರಿ ಅಶ್ವತ್ಥನಾರಾಯಣ ಅವರ ಮೊ.ಸಂ. 880541556ಕ್ಕೆ ಕರೆ ಮಾಡಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

About The Author

You May Also Like

More From Author

+ There are no comments

Add yours