ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಕೆಲಸಕ್ಕೆಅರ್ಜಿ ಆಹ್ವಾನ

1 min read

ತುಮಕೂರು, (ಜೂ.20) tumkurnews.in:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ಕೇಂದ್ರ ಸರ್ಕಾರದ ಅನುದಾನದ “ಒನ್ ಸ್ಟಾಪ್ ಸೆಂಟರ್-ಸಖಿ” ಯೋಜನೆಯ ತುಮಕೂರು ಕಛೇರಿಗೆ ಘಟಕ ಆಡಳಿತಾಧಿಕಾರಿ-01 ಹಾಗೂ ವಕೀಲರು(ಪ್ಯಾರಾ ಲೀಗಲ್‍ಹುದ್ದೆ)- 02 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಅರ್ಹ, ಸೇವಾ ಅನುಭವ ಹೊಂದಿರುವ 45 ವರ್ಷ ವಯೋಮಿತಿಯೊಳಗಿನ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹರಿರುವ ಮಹಿಳೆಯರು ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಭಾರತೀಯ ರೆಡ್‍ಕ್ರಾಸ್ ಭವನ, ಚರ್ಚ್ ಸರ್ಕಲ್ ಹತ್ತಿರ, ಅಶೋಕ ರಸ್ತೆ, ತುಮಕೂರು ರವರ ಕಛೇರಿಯಲ್ಲಿ ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿ ನಮೂನೆಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಜುಲೈ 8 ರಂದು ಸಂಜೆ 5 ಗಂಟೆಯೊಳಗಾಗಿ ಸದರಿ ಕಛೇರಿಗೆ ಖುದ್ದಾಗಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಛೇರಿ ದೂ.ಸಂ: 0816-2272590ನ್ನು ಸಂಪರ್ಕಿಸಬಹುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

About The Author

You May Also Like

More From Author

+ There are no comments

Add yours