ಹಳ್ಳಿಗಳಲ್ಲೂ ಮಾಸ್ಕ್ ಕಡ್ಡಾಯ, ತಪ್ಪಿದಲ್ಲಿ ದಂಡ

1 min read

 

ತುಮಕೂರು,ಜೂ.20 tumkurnews.in

ಕೋವಿಡ್ 19 ಸಾಂಕ್ರಾಮಿಕ ರೋಗವು ವ್ಯಾಪಕವಾಗಿ ಹರಡುತ್ತಿರುವುದರಿಂದ ಸಾರ್ವಜನಿಕರು ಮುಖಗವಸು (ಮಾಸ್ಕ್) ಧರಿಸುವುದು, ಕೈಗಳನ್ನು ಆಗಾಗ್ಗೆ ಸಾಬೂನಿನಿಂದ ತೊಳೆಯುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ರೋಗದ ನಿಯಂತ್ರಣ ಮಾಡುವಲ್ಲಿ ಸಹಕರಿಸಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ಮನವಿ ಮಾಡಿದ್ದಾರೆ.
ಕೋವಿಡ್ 19 ಸಾಂಕ್ರಾಮಿಕ ರೋಗವು ಪ್ರಮುಖವಾಗಿ ಪರಸ್ಪರ ಸಂಪರ್ಕ ಹಾಗೂ ವೈಯಕ್ತಿಕ ಶುಚಿತ್ವದ ಕೊರತೆಯಿಂದ ಬಹು ಬೇಗ ಹರಡುತ್ತಿದ್ದು, ರೋಗದ ತಡೆಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕೆಂದು ಜಿಲ್ಲೆಯ ಎಲ್ಲಾ ಗ್ರಾಮಪಂಚಾಯತಿಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ.
ಗ್ರಾಮಾಂತರ ಪ್ರದೇಶಗಳಲ್ಲಿ ಜನರು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಇರುವುದು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳದ ವ್ಯಕ್ತಿಗಳಿಗೆ 100 ರೂ. ದಂಡ ವಿಧಿಸಲು ಗ್ರಾಮಪಂಚಾಯತಿಗಳಿಗೆ ಸೂಚನೆ ನೀಡಲಾಗಿದೆ.

ಮಾಸ್ಕ್ ದಿನಾಚರಣೆ ಮೂಲಕ ಮಾಸ್ಕ್ ಧರಿಸಲು ಅರಿವು ಮೂಡಿಸಲಾಗಿದೆ. ಸಾರ್ವಜನಿಕರು ಮಾಸ್ಕ್ ಧರಿಸುವ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವ, ಕೈಗಳನ್ನು ಆಗಾಗ್ಗೆ ಸಾಬೂನಿನಿಂದ ಶುಚಿಗೊಳಿಸುವ, ಅಶುಚಿಯಾದ ಕೈಗಳಿಂದ ಬಾಯಿ, ಮೂಗು ಮತ್ತು ಕಣ್ಣುಗಳನ್ನು ಮುಟ್ಟಿಕೊಳ್ಳದಂತೆ ಜಾಗರೂಕತೆ ವಹಿಸುವುದರಿಂದ ಈ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಬಹುದೆಂದು ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಲಹೆ ನೀಡಿದ್ದು, ಸಾರ್ವಜನಿಕರೆಲ್ಲರೂ ಈ ಸಲಹೆಗಳನ್ನು ತಪ್ಪದೇ ಪಾಲಿಸಬೇಕೆಂದು ಅವರು ತಿಳಿಸಿದ್ದಾರೆ.

About The Author

You May Also Like

More From Author

+ There are no comments

Add yours