ಮಧುಗಿರಿ, (ಜೂ.24) tumkurnews.in
ಗುಬ್ಬಿ ತಾಲೂಕಿನ ವರ್ತಕರು ಸ್ವಯಂ ಪ್ರೇರಿತ ಬಂದ್ ಘೋಷಣೆ ಮಾಡಿರುವ ಬೆನ್ನಲ್ಲೇ ಮಧುಗಿರಿ ತಾಲೂಕಿನಲ್ಲಿ ವರ್ತಕರು ಸ್ವಯಂ ಪ್ರೇರಿತ ಲಾಕ್ ಡೌನ್ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಜೂ.24 ರಂದು ತಹಶೀಲ್ದಾರ್ ಗೆ ಅವರು ಮನವಿ ಸಲ್ಲಿಸಿದ್ದಾರೆ.
ಮಧುಗಿರಿ ಪಟ್ಟಣದಲ್ಲಿ ಕೊರೊನಾ ದಿನೇ ದಿನೇ ಹೆಚ್ಚುತ್ತಿದ್ದು, ನಾಗರೀಕರು ಮತ್ತು ವರ್ತಕರು ಆತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಮಧುಗಿರಿ ಪಟ್ಟಣದ ಎಲ್ಲಾ ಸಂಘ ಸಂಸ್ಥೆಗಳು, ಸ್ವಯಂ ಪ್ರೇರಿತರಾಗಿ ಜೂ.26, 27, 28 ರಂದು ಮೂರು ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಮಾಡಲು ತೀರ್ಮಾನಿಸಿದ್ದಾರೆ.
ಮುಂದುವರೆದು ಜೂನ್ 29 ರಿಂದ ಜುಲೈ 10 ರ ವರೆಗೂ ಬೆಳಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆಗಳ ವರೆಗೆ ಮಾತ್ರ ವ್ಯಾಪಾರ, ವಹಿವಾಟು ನಡೆಸುವುದಾಗಿ ನಂತರದ ಅವಧಿಯಲ್ಲಿ ಲಾಕ್ ಡೌನ್ ಮಾಡುವುದಾಗಿ ಸ್ವಯಂ ಪ್ರೇರಿತರಾಗಿ ನಿರ್ಧಾರಕ್ಕೆ ಬಂದಿದ್ದಾರೆ.
ಈ ಬಗ್ಗೆ ಮಧುಗಿರಿ ನಗರ ಧಾನ್ಯ ವರ್ತಕರ ಸಂಘ ಹಾಗೂ ನಾಗರೀಕ ಸಮಿತಿಯ ಲೆಟರ್ ಹೆಡ್ ನಲ್ಲಿ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಸಹಿ ಮಾಡಿ, ಮಧುಗಿರಿ ತಹಶಿಲ್ದಾರ್ ಮತ್ತು ಪುರಸಭೆ ಮುಖ್ಯಾಧಿಕಾರಿ, ಪೊಲೀಸ್ ಇಲಾಖೆಗೆ ಮನವಿ ಪತ್ರ ನೀಡಿದ್ದಾರೆ.
+ There are no comments
Add yours