ಸೋಂಕು ಹೆಚ್ಚಾಗುವ ಭೀತಿ, ಇನ್ಮುಂದೆ ತಾಲೂಕು ಕೇಂದ್ರಗಳಲ್ಲೇ ಚಿಕಿತ್ಸೆ

1 min read

https://chat.whatsapp.com/Haj1IrKLgZpAIglCBfQbtB" alt="" width="397" height="133" />

ತುಮಕೂರು, ಜೂ.24 tumkurnews.in:
ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಕೋವಿಡ್ 19 ಸೋಂಕು ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕೋವಿಡ್ ಹೆಲ್ತ್ ಸೆಂಟರ್ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ ರಾಕೇಶ್ ಕುಮಾರ್ ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಈ ಮಾಹಿತಿ ನೀಡಿದ ಅವರು, ಜಿಲ್ಲಾ ಕೇಂದ್ರದಲ್ಲಿ ಒಂದು ಸಾವಿರ ಬೆಡ್ ಗಳ ಜಿಲ್ಲಾ ಕೋವಿಡ್ ಆಸ್ಪತ್ರೆ ಕಾರ್ಯ ನಿರ್ವಹಿಸುತ್ತಿದೆ. ಇದರ ಜೊತೆಗೆ ಎರಡು ಖಾಸಗಿ ಮೆಡಿಕಲ್ ಕಾಲೇಜುಗಳನ್ನು ತೆಗೆದುಕೊಂಡು ಜಿಲ್ಲಾ ಕೇಂದ್ರದಲ್ಲಿ 1200 ಜನರಿಗೆ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ ಎಂದರು‌.
ಉಳಿದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ತಲಾ 50 ಹಾಸಿಗೆಗಳ ಕೋವಿಡ್ ಹೆಲ್ತ್ ಸೆಂಟರ್ ತೆರೆಯಲಾಗುವುದು, ಸಿರಾದಲ್ಲಿ ಹೊಸ ಆಸ್ಪತ್ರೆಯನ್ನು ಬಳಸಿಕೊಳ್ಳಲಾಗುತ್ತಿದೆ, ಪಾವಗಡದಲ್ಲಿ ಶೀಘ್ರವಾಗಿ ಆಗಲಿದೆ. ಮುಂದಿನ 15 ದಿನಗಳಲ್ಲಿ ತಾಲೂಕು ಕೇಂದ್ರಗಳಲ್ಲಿಯೇ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತದೆ ಎಂದರು.

About The Author

You May Also Like

More From Author

+ There are no comments

Add yours