ಪಾವಗಡದಲ್ಲಿ ಶಿಕ್ಷಕರಿಗೆ ಕ್ವಾರಂಟೈನ್, ತುಮಕೂರಿನ ಡಿಎಚ್ಒ ಕಚೇರಿಯಲ್ಲಿ ಸೀಲ್ ಡೌನ್

1 min read

 

ತುಮಕೂರು,(ಜೂ.26) tumkurnews.in
ಎಸ್.ಎಸ್.ಎಲ್.ಸಿ ಪರೀಕ್ಷಾ ಕರ್ತವ್ಯ ನಿರ್ವಹಿಸಿದ್ದ ಅಧಿಕಾರಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದ್ದು, 6 ಮಂದಿ‌ ಶಿಕ್ಷಕರನ್ನು ಕ್ವಾರಂಟೈನ್ ಮಾಡಲಾಗಿದೆ.
ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಅರಸಿಕೆರೆ ಗ್ರಾಮದಲ್ಲಿ ಪಾವಗಡ ತಾಲ್ಲೂಕು ಬಿಸಿಎಂ ವಿಸ್ತರಣಾಧಿಕಾರಿಯು ಗುರುವಾರ ಸ್ಕ್ವಾಡ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಅದರ ಬೆನ್ನಲ್ಲೇ ಶುಕ್ರವಾರ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ.
ಈ ಹಿನ್ನೆಲೆಯಲ್ಲಿ ಆ ಪರೀಕ್ಷೆ ಕೇಂದ್ರದ 6 ಜನ ಶಿಕ್ಷಕರನ್ನು ಕ್ವಾರಂಟೈನ್ ಮಾಡಲಾಗಿದೆ. ಅದೃಷ್ಟವಶಾತ್ ವಿದ್ಯಾರ್ಥಿಗಳು ಯಾರು ಕೂಡ ಆತನ ಸಂಪರ್ಕದಲ್ಲಿ ಇರಲಿಲ್ಲವಾದ್ದರಿಂದ ಆತಂಕ ಪಡುವ ಅಗತ್ಯವಿಲ್ಲ. ಪರೀಕ್ಷಾ ಕೇಂದ್ರವನ್ನು ಸ್ಯಾನಿಟೈಜ್ ಮಾಡಲು ಕ್ರಮ ವಹಿಸಲಾಗುತ್ತಿದೆ.

ಮತ್ತೊಂದು ಕಡೆ ತುಮಕೂರು ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಸಿಬ್ಬಂದಿಯೋರ್ವನಿಗೆ ಕೂಡ ಪಾಸಿಟಿವ್ ಬಂದಿದೆ. ಹೀಗಾಗಿ ಡಿಎಚ್ಒ ಕಚೇರಿಯ ಒಂದು ಭಾಗವನ್ನು ಸೀಲ್ ಡೌನ್ ಮಾಡಲು ಸಿದ್ಧತೆ ನಡೆಯುತ್ತಿದೆ. ಸೋಂಕಿತನ ಸಂಪರ್ಕದಲ್ಲಿದ್ದ ಸಿಬ್ಬಂದಿಗಳಲ್ಲಿ ಆತಂಕ ಶುರುವಾಗಿದೆ. ಇನ್ನಾದರೂ ಜನರು ಎಚ್ಚೆತ್ತುಕೊಂಡು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕಿದೆ.

About The Author

You May Also Like

More From Author

+ There are no comments

Add yours