ಕಂಟೈನ್ಮೆಂಟ್ ವಲಯದಲ್ಲಿರುವ ಎಲ್ಲರಿಗೂ ಕೊರೋನಾ ಪರೀಕ್ಷೆ; ಮಾಧುಸ್ವಾಮಿ

1 min read

 

ತುಮಕೂರು(ಜೂ.29) tumkurnews.in

ಜಿಲ್ಲೆಯ ಕಂಟೈನ್‍ಮೆಂಟ್ ವಲಯದಲ್ಲಿರುವ ಪ್ರತಿಯೊಬ್ಬರಿಗೂ ಕೋವಿಡ್ ತಪಾಸಣೆ ನಡೆಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಜಿಲ್ಲಾಡಳಿತಕ್ಕೆ ಸೂಚಿಸಿದರು.
ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿವೆ. ಆದುದರಿಂದ ಕಂಟೈನ್‍ಮೆಂಟ್ ವಲಯದಲ್ಲಿರುವ ಪ್ರತಿಯೊಬ್ಬರನ್ನೂ ತಪಾಸಣೆಗೆ ಒಳಪಡಿಸಬೇಕು, ಜಿಲ್ಲಾಸ್ಪತ್ರೆಯಲ್ಲಿ ಆರ್.ಟಿ.ಪಿ.ಸಿ.ಆರ್. ಪ್ರಯೋಗಾಲಯ ಇರುವುದರಿಂದ ಹೆಚ್ಚಿನ ಪರೀಕ್ಷೆಯನ್ನು ನಡೆಸಲು ಅನುಕೂಲವಾಗುತ್ತದೆ ಎಂದರು.
ಫೀವರ್ ಕ್ಲಿನಿಕ್‍ಗಳನ್ನು ಹೆಚ್ಚು ಮಾಡಬೇಕು, ಫೀವರ್ ಕ್ಲಿನಿಕ್‍ಗೆ ಬಂದ ಪ್ರತಿಯೊಬ್ಬರಿಗೂ ಪರೀಕ್ಷೆ ಮಾಡಬೇಕು ಎಂದು ಡಿ.ಸಿ ಕಚೇರಿಯಲ್ಲಿಂದು ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ತಿಳಿಸಿದರು.
ನಕಲಿ ವೈದ್ಯರು ಹಾಗೂ ಚೀಟಿಯಿಲ್ಲದೆ ಜ್ವರ, ನೆಗಡಿ, ಶೀತ, ಉಸಿರಾಟ ತೊಂದರೆಗೆ ಔಷಧಿಗಳನ್ನು ಮಾರಾಟ ಮಾಡುವ ಔಷಧಿ ಅಂಗಡಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.

You May Also Like

More From Author

+ There are no comments

Add yours