ಸೋಂಕಿತರ ಪೈಕಿ 8 ಜನರಿಗೆ ಮಾತ್ರವೇ ಲಕ್ಷಣಗಳಿತ್ತು; ಡಿಸಿ ಶಾಕಿಂಗ್ ಹೇಳಿಕೆ

1 min read

 

ತುಮಕೂರು (ಜೂ.29) tumkurnews.in

ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿರುವ ಬಹುತೇಕ ಸೋಂಕಿತರಿಗೆ ಸೋಂಕಿನ ಲಕ್ಷಣಗಳೇ ಕಂಡು ಬಂದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಕೆ ರಾಕೇಶ್ ಕುಮಾರ್ ತಿಳಿಸಿದರು.
ಡಿಸಿ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸೋಂಕಿತರ ಪೈಕಿ 8 ಮಂದಿಗೆ ಮಾತ್ರ ಸೋಂಕಿನ ಲಕ್ಷಣಗಳು ಕಂಡು ಬಂದಿವೆ ಎಂದು ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ ಅವರಿಗೆ ಮಾಹಿತಿ ನೀಡಿದರು.
ಸೋಂಕಿನ ಲಕ್ಷಣಗಳಿಲ್ಲದವರನ್ನು ಕೋವಿಡ್ ಕೇರ್ ಸೆಂಟರ್ ಗೆ ಸ್ಥಳಾಂತರಿಸಲು ಅವಕಾಶವಿದೆ.
ತುಮಕೂರು ನಗರದ ಹೊರ ವಲಯದಲ್ಲಿರುವ ಟ್ರಕ್‍ಟರ್ಮಿಲ್ ಸಮೀಪದ ಕಟ್ಟಡಕ್ಕೆ ಎರಡ್ಮೂರು ದಿನಗಳಲ್ಲಿ ಸ್ಥಳಾಂತರಿಸಲು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

You May Also Like

More From Author

+ There are no comments

Add yours