ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮೊದಲು ಈ ಕೆಲಸ ಮಾಡಿ ಎಂದ ಸಂಸದ ಬಸವರಾಜು

1 min read

 

ತುಮಕೂರು(ಜೂ.30) tumkurnews.in

ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಎಲ್ಲಾ ಇಲಾಖೆಗಳು ತಾವು ಅನುಷ್ಠಾನ ಮಾಡುವ ಯೋಜನೆಗಳ ಮಾಹಿತಿಯನ್ನು ಕಡ್ಡಾಯವಾಗಿ ಜಿಐಎಸ್ (ಭೌಗೋಳಿಕ ಮಾಹಿತಿ ವ್ಯವಸ್ಥೆ) ಪೋರ್ಟಲ್‍ಗೆ ಅಪ್‍ಲೋಡ್ ಮಾಡಬೇಕೆಂದು ಸಂಸದ ಜಿ.ಎಸ್. ಬಸವರಾಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತಿಯಲ್ಲಿಂದು ಜರುಗಿದ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಪ್ರಗತಿ (ದಿಶಾ) ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದ ಕೈಗೊಂಡಿರುವ ಯೋಜನೆಗಳು, ಪ್ರಸ್ತುತ ಪ್ರಗತಿಯಲ್ಲಿರುವ ಯೋಜನೆ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ಯೋಜನೆಗಳ ಸಂಪೂರ್ಣ ಅಂಕಿ-ಅಂಶಗಳನ್ನು ತುಮಕೂರು ಜಿಐಎಸ್ ಪೋರ್ಟಲ್‍ನಲ್ಲಿ 1 ತಿಂಗಳೊಳಗಾಗಿ ಅಪ್‍ಲೋಡ್ ಮಾಡಬೇಕು.
ಇದರಿಂದ ಜಿಲ್ಲೆಯ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸಲು ಅನುವಾಗುತ್ತದೆ.
ಇದಕ್ಕಾಗಿ ಪ್ರತಿ ಇಲಾಖೆಯೂ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಿಸಿ, ಇನ್ನೆರಡು ದಿನಗಳೊಳಗಾಗಿ ಅಧಿಕಾರಿಗಳ ಪಟ್ಟಿಯನ್ನು ಜಿಲ್ಲಾ ಪಂಚಾಯಿತಿಗೆ ಸಲ್ಲಿಸಬೇಕೆಂದು ನಿರ್ದೇಶನ ನೀಡಿದರು.
ಜಿಐಎಸ್ ಪ್ರಕ್ರಿಯೆ ನಿರಂತರವಾದ ಪ್ರಕ್ರಿಯೆಯಾಗಿದೆ. ಎಲ್ಲಾ ಇಲಾಖೆಗಳು ತಮ್ಮ ಇಲಾಖೆಗಳ ಯೋಜನೆಗಳ ಮಾಹಿತಿಯನ್ನು ಅಪ್‍ಲೋಡ್ ಮಾಡಬೇಕು. ಜಿಐಎಸ್ ಅಪ್‍ಲೋಡ್ ಪ್ರಕ್ರಿಯೆಯಲ್ಲಿ ಜಿಲ್ಲೆಗೆ ಕೇಂದ್ರದಿಂದ ಪ್ರಶಂಸೆ ಸಿಕ್ಕಿದೆ. ಇನ್ನಷ್ಟು ಅನುಸರಣೆ ಮಾಡಿದಲ್ಲಿ ಉತ್ತಮ ಪ್ರಗತಿ ಸಾಧಿಸಬಹುದೆಂದರು.

About The Author

You May Also Like

More From Author

+ There are no comments

Add yours