ತುಮಕೂರು(ಜು.2) tumkurnews.in
ರಾಜ್ಯದಲ್ಲಿ ಈವರೆಗೆ 32 ವಿದ್ಯಾರ್ಥಿಗಳು ಕೋವಿಡ್ 19 ಪ್ರಕರಣದಿಂದ ಪರೀಕ್ಷೆಗೆ ಹಾಜರಾಗದೇ ಪರೀಕ್ಷೆಯಿಂದ ಹೊರಗೆ ಉಳಿದಿದ್ದಾರೆ.
ಈ ಬಗ್ಗೆ ಸ್ವತಃ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
‘ಪರೀಕ್ಷೆಗೆ ಗೈರಾಗಿರುವ ವಿದ್ಯಾರ್ಥಿಗಳಿಗೆ ಆಗಸ್ಟ್ ತಿಂಗಳಿನಲ್ಲಿ ನಡೆಯುವ ಪೂರಕ ಪರೀಕ್ಷೆಯಲ್ಲಿ ಫ್ರೆಶರ್ಸ್ ಗಳಾಗಿ ಗುರುತಿಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುತ್ತದೆ’ ಎಂದು ತಿಳಿಸಿದ್ದಾರೆ.
ಉಳಿದಂತೆ ಪರೀಕ್ಷಾ ಕೇಂದ್ರದಿಂದ ಯಾವ ವಿದ್ಯಾರ್ಥಿಯ ಆರೋಗ್ಯಕ್ಕೆ ತೊಂದರೆಯಾಗದಂತೆ ಎಚ್ಚರವಹಿಸಲಾಗಿದೆ.
ಮಕ್ಕಳಿಗೆ ಆತ್ಮವಿಶ್ವಾಸ ತುಂಬಿ ಶಾಂತಿಯುತವಾಗಿ ಪರೀಕ್ಷೆ ನಡೆಯುವಂತೆ ಪೊಲೀಸ್, ಕಂದಾಯ, ಆರೋಗ್ಯ, ಸಾರಿಗೆ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.
ಸಚಿವರು ತುಮಕೂರು ನಗರದ ಕ್ಯಾತ್ಸಂದ್ರ ಸರ್ಕಾರಿ ಪ್ರೌಢಶಾಲೆ, ವಿದ್ಯಾ ಪ್ರೌಢಶಾಲೆ, ಬಸವೇಶ್ವರ ಪ್ರೌಢಶಾಲೆ ಸೇರಿದಂತೆ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಜಿ.ಬಿ ಜ್ಯೋತಿಗಣೇಶ್, ವೈ.ಎ ನಾರಾಯಣಸ್ವಾಮಿ ಡಿಡಿಪಿಐ ಎಂ.ಆರ್ ಕಾಮಾಕ್ಷಮ್ಮ ಇದ್ದರು.
+ There are no comments
Add yours