ತುಮಕೂರು(ಜು.3) tumkurnews.in
ರಾಜ್ಯದ ಇಂದಿನ ಪರಿಸ್ಥಿತಿಗೆ ಸಿದ್ದರಾಮಯ್ಯ ಅವರ ಸರಕಾರವೇ ನೇರ ಕಾರಣ ಎಂದು ತುಮಕೂರು ನಗರ ಬಿಜೆಪಿ ಶಾಸಕ ಜಿ.ಬಿ ಜ್ಯೋತಿಗಣೇಶ್ ಆರೋಪಿಸಿದ್ದಾರೆ.
ನಗರದಲ್ಲಿ ಶುಕ್ರವಾರ 25ನೇ ವಾರ್ಡಿನಲ್ಲಿ ಸಿಸಿ ಚರಂಡಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
‘ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರದ ನಂತರ ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಒಂದೆಡೆ ನೆರೆಹಾವಳಿಯಿಂದ ತತ್ತರಿಸಿದ ಉತ್ತರ ಕರ್ನಾಟಕದ ಭಾಗಕ್ಕೆ ಸಾವಿರಾರು ಕೋಟಿ ರೂ.ಖರ್ಚಾಗಿದ್ದು, ಈಗ ಕೊರೋನಾದಿಂದ ಆರ್ಥಿಕತೆ ಶೇ.80ರಷ್ಟು ಕುಸಿದಿದೆ. ಕೇವಲ 20 ರಷ್ಟು ಮಾತ್ರ ಆರ್ಥಿಕ ಚಟುವಟಿಕೆಗಳು ನಡೆಯುತ್ತಿದ್ದು, ತೆರಿಗೆ ಸಂಗ್ರಹದಲ್ಲೂ ಭಾರಿ ಇಳಿಕೆ ಕಂಡಿದೆ’ ಎಂದು ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಅನಾವರಣ ಮಾಡಿದರು.
‘ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸಿಲ್ಲ ಎಂದರೆ ತೆರಿಗೆ ಸಂಗ್ರಹ ಕಷ್ಟವಾಗಲಿದೆ. ಬಜೆಟ್‍ನಲ್ಲಿ ಘೋಷಣೆಯಾದ ಅನುದಾನ ಬಿಡುಗಡೆ ಮಾಡಲು ಪ್ರತಿ ತಿಂಗಳು ತೆರಿಗೆ ಸಂಗ್ರಹವಾಗಬೇಕಿತ್ತು. ಮಾರ್ಚ್ 25 ರಿಂದಲೇ ಲಾಕ್‍ಡೌನ್ ಆಗಿದ್ದರಿಂದ ಆರ್ಥಿಕ ಪರಿಸ್ಥಿತಿ ಸುಧಾರಿಸಿಲ್ಲ. ಈ ಬಾರಿ ರಾಜಸ್ವ ಸಂಗ್ರಹವೂ ಆಗಿಲ್ಲ’ ಎಂದು ರಾಜ್ಯದ ಹಣಕಾಸು ಪರಿಸ್ಥಿತಿಯನ್ನು ಬಹಿರಂಗಪಡಿಸಿದರು.
+ There are no comments
Add yours