ಕುಣಿಗಲ್ ಶಾಸಕ ಡಾ.ರಂಗನಾಥ್ ಗೆ ಕೊರೋನಾ ಪಾಸಿಟಿವ್

1 min read

ತುಮಕೂರು(ಜು.6) tumkurnews.in

ಕರ್ನಾಟಕದ ಮತ್ತೋರ್ವ ಶಾಸಕರಿಗೆ ಕೊರೋನಾ ವೈರಸ್ ಪಾಸಿಟಿವ್ ಬಂದಿದೆ.
ತುಮಕೂರು ಜಿಲ್ಲೆಯ ಕುಣಿಗಲ್ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಜು.5 ರಂದು ಕೊರೋನಾ ಪರೀಕ್ಷೆಗೆ ಒಳಪಟ್ಟಿದ್ದರು, ಜು.6ರಂದು ಸೋಂಕು ಪಾಸಿಟಿವ್ ಕಂಡು ಬಂದಿದೆ. ಸೋಂಕು ದೃಢಪಟ್ಟ ಬೆನ್ನಲ್ಲೇ ಶಾಸಕ ಡಾ.ರಂಗನಾಥ್ ಅವರು ಬೆಂಗಳೂರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಸಂಬಂಧಿಯಾಗಿದ್ದಾರೆ

ಕಳೆದ ಮೂರು ದಿನಗಳ ಹಿಂದಷ್ಟೇ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿಗೆ ಕೊರೊನಾ ಪಾಸಿಟಿವ್ ಇರುವುದಾಗಿ ತಿಳಿದು ಬಂದಿತ್ತು. ರಾಜ್ಯದ ಎರಡನೇ ಶಾಸಕ ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ.

ತಮಗೆ ಕೊರೋನಾ ಸೋಂಕು ತಗಲಿರುವುದನ್ನು ಶಾಸಕ ಡಾ.ರಂಗನಾಥ್ tumkurnews.in ಗೆ ಖಚಿತ ಪಡಿಸಿದ್ದಾರೆ.

 

About The Author

You May Also Like

More From Author

+ There are no comments

Add yours