ಕೊರೋನಾ ನಿಯಂತ್ರಣಕ್ಕೆ ಖಾಸಗಿಯವರ ಸಹಕಾರ ಕೋರಿದ ಸಚಿವ ಮಾಧುಸ್ವಾಮಿ

1 min read

ತುಮಕೂರು(ಜು.6) tumkurnews.in

ಜಿಲ್ಲೆಯಲ್ಲಿ ದಿನೇ ದಿನೆ ಕೋವಿಡ್ 19 ಪ್ರಕರಣಗಳು ಹೆಚ್ಚುತ್ತಿದ್ದು, ಈ ಸೋಂಕು ಸಮುದಾಯದಲ್ಲಿ ಹರಡುತ್ತಿರುವುದು ಆಘಾತವನ್ನು ಉಂಟು ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ ತಿಳಿಸಿದರು.
ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು, ಇದರಿಂದ ಸೋಂಕು ನಿಯಂತ್ರಣ ನಮ್ಮ ಕೈತಪ್ಪುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ.
ಸಾರ್ವಜನಿಕರ ಸಹಭಾಗಿತ್ವದಿಂದ ಮಾತ್ರ ಸೋಂಕು ಹರಡುವಿಕೆಯನ್ನು ನಿಯಂತ್ರಣಕ್ಕೆ ತರಬಹದಾಗಿದೆ. ಈ ನಿಟ್ಟಿನಲ್ಲಿ ಜನರು ಮುನ್ನೆಚ್ಚರಿಕೆ ವಹಿಸುವ ಮೂಲಕ ಸಹಕರಿಸಬೇಕೆಂದು ಮನವಿ ಮಾಡಿದರು.
ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗಾಗಿ 200 ಹಾಸಿಗೆಗಳ ವ್ಯವಸ್ಥೆಯಿದ್ದು, ಹೆಚ್ಚುವರಿಯಾಗಿ 150 ಸೇರಿ ಒಟ್ಟು 350 ಹಾಸಿಗೆಗಳು ಹಾಗೂ ಪ್ರತಿ ತಾಲೂಕು ಆಸ್ಪತ್ರೆಯಲ್ಲಿ ಕನಿಷ್ಠ 50 ಹಾಸಿಗೆಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಅಲ್ಲದೆ ವೈದ್ಯಕೀಯ ಕಾಲೇಜುಗಳಲ್ಲಿ 500 ಹಾಸಿಗೆಗಳು ಲಭ್ಯವಿದ್ದು, ಖಾಸಗಿ ಆಸ್ಪತ್ರೆಗಳಿಗೂ ಹಾಸಿಗೆಗಳ ವ್ಯವಸ್ಥೆ ಒದಗಿಸಲು ಮನವಿ ಮಾಡಲಾಗಿದೆ ಎಂದರು.
ಜಿಲ್ಲೆಯಲ್ಲಿ 9 ಕೋವಿಡ್ ಕೇರ್ ಸೆಂಟರ್‌ ಗಳಿದ್ದು, ಈ ಸೆಂಟರ್‌ನಲ್ಲಿ ರೋಗ ಲಕ್ಷಣಗಳಿಲ್ಲದ ಅಥವಾ ಸಣ್ಣಪುಟ್ಟ ಖಾಯಿಲೆಯಿಂದ ಬಳಲುತ್ತಿರುವವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಒಟ್ಟಿನಲ್ಲಿ ಸರಕಾರದಿಂದ ಪರಿಸ್ಥಿತಿ ನಿಭಾಯಿಸಲು ಸಾಕಷ್ಟು ಪ್ರಯತ್ನಗಳಾಗುತ್ತಿದ್ದು, ಇದೀಗ ಖಾಸಗಿ ಆಸ್ಪತ್ರೆಗಳ ಮೊರೆ ಹೋಗಿದೆ. ಖಾಸಗಿ ಆಸ್ಪತ್ರೆಗಳು ಯಾವ ರೀತಿಯಲ್ಲಿ ಸ್ಪಂದಿಸುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.

About The Author

You May Also Like

More From Author

+ There are no comments

Add yours