ಶಾಲೆ ಪ್ರಾರಂಭ ಮಾಡಲಾಗುತ್ತದೆಯೇ? ಆನ್ ಲೈನ್ ಶಿಕ್ಷಣದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಸುರೇಶ್ ಕುಮಾರ್

1 min read

ತುಮಕೂರು (ಜು.7)
Tumkurnews.in

ರಾಜ್ಯದಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಹಾಗೂ ಆನ್ಲೈನ್ ಶಿಕ್ಷಣದ ಬಗ್ಗೆ ಸದ್ಯಕ್ಕೆ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಜು.7 ಮಂಗಳವಾರ ರಾತ್ರಿ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದು, ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಸ್ಪಷ್ಟನೆಯ ಸಾರಾಂಶ:
“ಒಂದು ಖಾಸಗಿ ಟಿವಿ ಚಾನೆಲ್‌ ಇಂದು ರಾತ್ರಿ 9 ಗಂಟೆಗೆ ನನ್ನ ವಿಚಾರದಲ್ಲಿ ಸುಳ್ಳು ಮಾಹಿತಿ ನೀಡಿ ತೇಜೋವಧೆ ಮಾಡುವ ಪ್ರಯತ್ನ ಮಾಡಿರುವುದು ನನಗೆ ವೇದನೆ ತಂದಿದೆ.
ಶಾಲೆಗಳನ್ನು ಸಧ್ಯಕ್ಕೆ ಪ್ರಾರಂಭ ಮಾಡುವ ನಿರ್ಧಾರ ನಮ್ಮ ಸರ್ಕಾರ ಕೈಗೊಂಡಿಲ್ಲ ಎಂಬುದನ್ನು ಸ್ಪಷ್ಟಗೊಳಿಸುತ್ತೇನೆ. ಆ ಯೋಚನೆಯೇ ಸರಕಾರದ ಮುಂದಿಲ್ಲ ಎಂಬುದನ್ನು ಪದೇ ಪದೇ ಹೇಳಿದ್ದರೂ ಈ ಸುಳ್ಳು ಮಾಹಿತಿಯೇಕೆ?
ಹಾಗೆಯೇ ಆನ್-ಲೈನ್ ಕುರಿತೂ ಸರಕಾರ ಯಾವುದೇ ನಿರ್ಧಾರ ಘೋಷಿಸಿಲ್ಲ.
ತಜ್ಞರ ಸಮಿತಿ ವರದಿ ಸರಕಾರದ ನಿರ್ಧಾರವಲ್ಲ. ಮೇಲಾಗಿ ಆನ್ ಲೈನ್ ಕುರಿತು ಹೈಕೋರ್ಟಿನಲ್ಲಿ ವಿಚಾರಣೆ ಮುಗಿದಿದ್ದು ತೀರ್ಪು ಬರಬೇಕಿದೆ.
ಅನಗತ್ಯವಾಗಿ ಜನರಲ್ಲಿ ಗೊಂದಲ ನಿರ್ಮಿಸಿ ನನ್ನ ಮೇಲೆ ಸಂಪೂರ್ಣ ಅಪಾರ್ಥ ಬರುವಂತೆ ಮಾಡಿರುವುದು, ನನಗೆ ಫೋನ್ ಕರೆಗಳ ಘೇರಾವ್ ಮಾಡಿ ಎಂದು ವೀಕ್ಷಕರಿಗೆ ಪ್ರಚೋದನೆ ನೀಡಿರುವುದು ಸರಿಯಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

About The Author

You May Also Like

More From Author

+ There are no comments

Add yours