ತುಮಕೂರು ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ಜನಜೀವನ ಅಸ್ತವ್ಯಸ್ತ

1 min read

 

Tumkurnews
ತುಮಕೂರು; ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬಹುತೇಕ ಕಡೆ ಕೆರೆಕಟ್ಟೆಗಳು ತುಂಬಿ ಹರಿಯುತ್ತಿವೆ. ಕೆಲವು ಭಾಗಗಳಲ್ಲಿ ರಸ್ತೆಗಳು ಕೊಚ್ಚೆಗುಂಡಿಗಳಾಗಿದ್ದರೆ, ಅನೇಕ ಕಡೆ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ.
ಗುಬ್ಬಿಯಲ್ಲಿ ಜೋರು‌ ಮಳೆ; ಗುಬ್ಬಿಯ ಚಂದ್ರಶೇಖರಪುರ ಭಾಗದಲ್ಲಿ ಮಳೆಯ ರಭಸಕ್ಕೆ ರಸ್ತೆ ಕೊಚ್ಚಿಕೊಂಡು ಹೋಗಿರುವ ಘಟನೆ ನಡೆದಿದೆ. ರಾ.ಹೆ 206 ರಸ್ತೆ ಕಾಮಗಾರಿ ನಡೆಯುತ್ತಿರುವ ಭಾಗದಲ್ಲಿ ರಸ್ತೆಯ ಪಕ್ಕದಲ್ಲಿ ವೈಜ್ಞಾನಿಕ ಚರಂಡಿಗಳು ಮಾಡದೇ ಇರುವುದರಿಂದ ರಸ್ತೆಯಲ್ಲಿ ನೀರು ನಿಂತಿದ್ದು, ದ್ವಿಚಕ್ರ ವಾಹನ ಸವಾರರು, ಆಟೋ, ಕಾರು, ಪಾದಚಾರಿಗಳಿಗೆ ಸಾಕಷ್ಟು ಸಮಸ್ಯೆ ಸೃಷ್ಟಿಯಾಗಿದೆ.

ವಿದ್ಯಾರ್ಥಿ ಬಸ್ ಪಾಸ್ ಗೆ ಏನು ಮಾಡುವುದು?; ಇಲ್ಲಿದೆ KSRTC ಮಾಹಿತಿ
ಗುಬ್ಬಿ ತಾಲೂಕಿನ ದೊಡ್ಡಗುಣಿ ಹಾಗೂ ದೊಡ್ಡಪಾಳ್ಯ ಗ್ರಾಮದ ತಿರುವುಗಳಲ್ಲಿ ಸಾಕಷ್ಟು ನೀರು ರಸ್ತೆಯ ಮಧ್ಯ ಭಾಗದಲ್ಲಿ ಕೆರೆಯಂತೆ ನಿಂತಿದೆ. ರಸ್ತೆಯಲ್ಲಿ ಓಡಾಡಲು ಸಹ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಸುಮಾರು 2 ಕಿಲೋಮೀಟರ್ ನಿಂದ ಬರುವ ನೀರು ಗ್ರಾಮದ ಒಳಗೆ ನುಗ್ಗುತ್ತಿದೆ. ಚರಂಡಿ ವ್ಯವಸ್ಥೆ ಮಾಡದೇ ಇರುವುದು ಸಾಕಷ್ಟು ಸಮಸ್ಯೆಗಳಿಗೆ ಕಾರಣವಾಗಿದೆ. ಒಟ್ಟಾರೆಯಾಗಿ ಜಿಲ್ಲೆಯ ವಿವಿಧೆಡೆ ಮಳೆ ಅವಾಂತರ ಸೃಷ್ಟಿಸಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಶಾಲಾ ಮಕ್ಕಳೊಂದಿಗೆ ಸಿಎಂ ಸಂವಾದ; ಮಕ್ಕಳು ಏನೇನು ಪ್ರಶ್ನೆ ಕೇಳಿದ್ದಾರೆ ನೋಡಿ

About The Author

You May Also Like

More From Author

+ There are no comments

Add yours