ಪಿಯುಸಿ, ಪದವಿ ಓದಿದವರಿಗೆ ಉದ್ಯೋಗ; ನೇರ ಸಂದರ್ಶನ

1 min read

https://chat.whatsapp.com/Haj1IrKLgZpAIglCBfQbtB" alt="" width="397" height="133" />

Tumkurnews
ತುಮಕೂರು; ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಮಾದರಿ ವೃತ್ತಿ ಕೇಂದ್ರ ಸಂಸ್ಥೆಯ ಸಹಭಾಗಿತ್ವದಲ್ಲಿ ಉದ್ಯೋಗ ನೀಡುವ ಸಂಬಂಧ ಆಸಕ್ತ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಯಲಿದೆ. ಪಿಯುಸಿ ಮತ್ತು ಯಾವುದೇ ಪದವಿ ಪಾಸಾದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಅರ್ಹ ಅಭ್ಯರ್ಥಿಗಳು ಮೇ 25 ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಡಿ.ಸಿ.ಸಿ. ಬ್ಯಾಂಕ್ ಎದುರು, ಚರ್ಚ್ ಸರ್ಕಲ್ ಹತ್ತಿರ, ತುಮಕೂರು ಇಲ್ಲಿ ತಮ್ಮ ಬಯೋಡೇಟಾದೊಂದಿಗೆ ಸಂದರ್ಶನಕ್ಕೆ ಹಾಜರಾಗಲು ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816-2278488, 9513136642, 8123282455 ಇವರಿಗೆ ಸಂಪರ್ಕಿಸಬಹುದಾಗಿದೆ.

About The Author

You May Also Like

More From Author

+ There are no comments

Add yours