ಮೇ 24ರಿಂದ ಲೋಕಾಯುಕ್ತರಿಂದ ಸಾರ್ವಜನಿಕ ಕುಂದು ಕೊರತೆ ಸಭೆ

1 min read

https://chat.whatsapp.com/Haj1IrKLgZpAIglCBfQbtB" alt="" width="397" height="133" />

Tumkurnews
ತುಮಕೂರು; ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಮೇ 24, 26, 30, 31 ರಂದು ಸಾರ್ವಜನಿಕ ಕುಂದು ಕೊರತೆ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಭೆಯು ಆಯಾ ತಾಲ್ಲೂಕು ಪಂಚಾಯತಿ ಭವನದಲ್ಲಿ ನಿಗದಿಪಡಿಸಿದ ದಿನಾಂಕದಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದ್ದು, ಮಧುಗಿರಿ ತಾಲ್ಲೂಕಿನಲ್ಲಿ ಮಾತ್ರ ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ.
ಮೇ 24ರಂದು ಪಾವಗಡ ಹಾಗೂ ಮಧುಗಿರಿ ತಾಲ್ಲೂಕಿನ ಸಾರ್ವಜನಿಕ ಕುಂದು ಕೊರತೆ ಸಭೆಯನ್ನು ಪೊಲೀಸ್ ಉಪಾಧೀಕ್ಷಕ ರವೀಶ್ ಸಿ.ಆರ್. ನಡೆಸುವರು. ಮೇ 26ರಂದು ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸಾರ್ವಜನಿಕ ಕುಂದು ಕೊರತೆ ಸಭೆಯನ್ನು ಪೊಲೀಸ್ ನಿರೀಕ್ಷಕ ವಿಜಯ್ ಕುಮಾರ್ ಜಿ.ಆರ್. ನಡೆಸುವರು. ಮೇ 30 ರಂದು ಗುಬ್ಬಿ ತಾಲ್ಲೂಕಿನ ಸಾರ್ವಜನಿಕ ಕುಂದು ಕೊರತೆ ಸಭೆಯನ್ನು ಪೊಲೀಸ್ ನಿರೀಕ್ಷಕ ರಾಮರೆಡ್ಡಿ ಕೆ. ಅವರು ನಡೆಸುವರು. ಮೇ 31ರಂದು ಕುಣಿಗಲ್ ತಾಲ್ಲೂಕಿನ ಸಾರ್ವಜನಿಕ ಕುಂದು ಕೊರತೆ ಸಭೆಯನ್ನು ಪೊಲೀಸ್ ನಿರೀಕ್ಷಕ ವಿಜಯ್ ಕುಮಾರ್ ಜಿ.ಆರ್. ಅವರು ನಡೆಸುವರು.
ಸಾರ್ವಜನಿಕರು ಈಗಾಗಲೇ ಸರ್ಕಾರಿ ಕಚೇರಿಗಳಿಗೆ ಅರ್ಜಿಯನ್ನು ಸಲ್ಲಿಸಿದ್ದು, ಅರ್ಜಿ ಇತ್ಯರ್ಥವಾಗದೆ ಬಾಕಿ ಉಳಿದಿರುವ ಬಗ್ಗೆ ಹಾಗೂ ಆಗಬೇಕಾಗಿರುವ ಕೆಲಸಗಳ ಬಗ್ಗೆ ಅರ್ಜಿಯನ್ನು ಸ್ವೀಕರಿಸಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸ್ಥಳದಲ್ಲಿಯೇ ಚರ್ಚಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

About The Author

You May Also Like

More From Author

+ There are no comments

Add yours