ಮೀನುಗಾರಿಕೆ ಇಲಾಖೆ; ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

1 min read

https://chat.whatsapp.com/Haj1IrKLgZpAIglCBfQbtB" alt="" width="397" height="133" />

Tumkurnews
ತುಮಕೂರು; ಮೀನುಗಾರಿಕೆ ಇಲಾಖೆಯಿಂದ 2022-23ನೇ ಸಾಲಿಗೆ ರಾಜ್ಯ ವಲಯ, ಜಿಲ್ಲಾ ವಲಯದ ಫಲಾನುಭವಿ ಆಧಾರಿತ ಯೋಜನೆಗಳಡಿ ನೀಡಲಾಗಿರುವ ಗುರಿಗಳಿಗೆ ಸಂಬಂಧಿಸಿದಂತೆ ಆಸಕ್ತ ವ್ಯಕ್ತಿ, ಸಂಘ-ಸಂಸ್ಥೆಗಳಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕೆರೆ, ಜಲಾಶಯಗಳ ಅಂಚಿನಲ್ಲಿ ನಿರ್ಮಿಸಿರುವ ಮೀನುಮರಿ ಪಾಲನಾ ಕೊಳಗಳಲ್ಲಿ ಮೀನು ಮರಿಗಳನ್ನು ಪಾಲನೆ ಮಾಡಲು ಸಹಾಯಧನ ನೀಡುವ ಯೋಜನೆ, ಮೀನು ಮರಿ ಖರೀದಿಗೆ ಸಹಾಯಧನ, ಮೀನುಗಾರಿಕೆ ಸಲಕರಣೆ ಕಿಟ್ಟುಗಳ ಸರಬರಾಜು ಯೋಜನೆ, ಜಿಲ್ಲಾ ವಲಯ ಮೀನು ಮಾರುಕಟ್ಟೆ ಮತ್ತು ಮತ್ಸ್ಯವಾಹಿನಿಗೆ ಸಹಾಯಧನಗಳಿಗೆ ಅರ್ಜಿ ಸಲ್ಲಿಸಬಹುದು. ಆಸಕ್ತ ವ್ಯಕ್ತಿ, ಸಂಘ-ಸಂಸ್ಥೆಗಳು ಈ ಕಾರ್ಯಕ್ರಮಗಳಡಿ ಸಂಬಂಧಿಸಿದ ತಾಲ್ಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗಳಿಂದ ನಿಗದಿತ ನಮೂನೆಯ ಅರ್ಜಿಗಳನ್ನು ಪಡೆದು ಅಗತ್ಯವಿರುವ ಎಲ್ಲಾ ದಾಖಲೆಗಳೊಂದಿಗೆ ಮೇ 31 ರೊಳಗಾಗಿ ಸಂಬಂಧಿಸಿದ ತಾಲ್ಲೂಕು ಮಟ್ಟದ ಕಚೇರಿಗಳಲ್ಲೇ ಅಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂ: 8277200300 ಅಥವಾ ಸಂಬಂಧಿಸಿದ ಮೀನುಗಾರಿಕೆ ಕಚೇರಿಗಳನ್ನು ಸಂಪರ್ಕಿಸಬೇಕೆಂದು ಮೀನುಗಾರಿಕೆ ಉಪನಿದೇರ್ಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಕಲಚೇತನರಿಗೆ ಸರ್ಕಾರಿ ಸೌಲಭ್ಯ ತಲುಪಿಸಲು ಸಹಾಯವಾಣಿ ಆರಂಭ

About The Author

You May Also Like

More From Author

+ There are no comments

Add yours