ಪಠ್ಯ ಪುಸ್ತಕವಾಯ್ತು, ಈಗ ಸರ್ಕಾರಿ ಕಾರ್ಯಕ್ರಮಗಳಿಗೂ ರೋಹಿತ್ ಚಕ್ರತೀರ್ಥ ಪ್ರಮುಖ ಅತಿಥಿ!

1 min read

 

Tumkurnews
ತುಮಕೂರು; ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಗೆ ರೋಹಿತ್ ಚಕ್ರತೀರ್ಥರನ್ನು ಅಧ್ಯಕ್ಷರನ್ನಾಗಿಸಿದ ವಿವಾದ ತಣ್ಣಗಾಗುವ ಮುನ್ನವೇ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ರೋಹಿತ್ ಚಕ್ರತೀರ್ಥ ಅತಿಥಿಯಾಗಿ ಪಾಲ್ಗೊಂಡಿದ್ದಾರೆ.

ಹಣಕ್ಕಾಗಿ ಕಿಡ್ನಾಪ್; ತುಮಕೂರು ಎಸ್ಪಿ ಕಚೇರಿ ಎದುರು ಮಹಿಳೆ ಆತ್ಮಹತ್ಯೆಗೆ ಯತ್ನ

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾದ ಹಿನ್ನೆಲೆಯಲ್ಲಿ ಜನರಿಗೆ ಮತ್ತು ಯುವಪೀಳಿಗೆಗೆ ಸ್ವಾತಂತ್ರ್ಯ ಹೋರಾಟಗಾರರ ಪರಿಚಯ ಮತ್ತು ಚಳುವಳಿ ನಡೆದ ಜಾಗಗಳ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮವನ್ನು ಶನಿವಾರ ತುಮಕೂರಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ನಗರದ ಟೌನ್ ಹಾಲ್ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ರೋಹಿತ್ ಚಕ್ರತೀರ್ಥ ಪ್ರಧಾನ ಭಾಷಣಕಾರರಾಗಿ ಆಗಮಿಸಿದ್ದರು. ಈ ಕಾರ್ಯಕ್ರಮವನ್ನು ತುಮಕೂರು ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಮತದಾರರ ಗುರುತಿನ ಚೀಟಿ ವಿತರಣೆಗೆ ಗ್ರಹಣ; ಕಾರಣ ಕ್ಷುಲ್ಲಕ!
ಪಠ್ಯ ಪುಸ್ತಕ ಪರಿಷ್ಕರಣೆ ವಿವಾದದ ಹಿನ್ನೆಲೆಯಲ್ಲಿ ಸಮಿತಿಯ ಅಧ್ಯಕ್ಷ ಸ್ಥಾನದಿಂದ ರೋಹಿತ್ ರನ್ನು‌ ಕೈ ಬಿಡಬೇಕು ಎಂದು ಪ್ರಗತಿಪರ ಚಿಂತಕರು ಒತ್ತಾಯಿಸುತ್ತಿದ್ದಾರೆ. ಇದರ ನಡುವೆಯೇ ಸರ್ಕಾರಿ ಕಾರ್ಯಕ್ರಮದಲ್ಲಿ ರೋಹಿತ್ ಚಕ್ರತೀರ್ಥ ಮುಖ್ಯ ಭಾಷಣಕಾರರಾಗಿ ಭಾಗವಹಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸಂಸದ ಜಿ.ಎಸ್ ಬಸವರಾಜು, ಶಾಸಕ ಜಿ.ಬಿ ಜ್ಯೋತಿಗಣೇಶ್, ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ರೇವಣ್ಣ, ಮೇಯರ್ ಬಿ.ಜಿ ಕೃಷ್ಣಪ್ಪ, ಜಿಪಂ ಸಿಇಒ ಡಾ.ಕೆ ವಿದ್ಯಾಕುಮಾರಿ, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್ ಸಿದ್ದಲಿಂಗಪ್ಪ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎನ್ ನರಸಿಂಹರಾಜು ಉಪಸ್ಥಿತರಿದ್ದರು. ನೂರಾರು ವಿದ್ಯಾರ್ಥಿಗಳು, ಸಾರ್ವಜನಿಕರು ಹಾಜರಿದ್ದರು.

ತುಮಕೂರಿನ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

About The Author

You May Also Like

More From Author

+ There are no comments

Add yours