ರೋಹಿತ್ ಚಕ್ರತೀರ್ಥ ವಿರುದ್ಧ ತೀವ್ರಗೊಂಡ ಆಕ್ರೋಶ; ಒಕ್ಕಲಿಗರ ಪ್ರತಿಭಟನೆ

1 min read

 

Tumkurnews
ತುಮಕೂರು; ರಾಷ್ಟ್ರಕವಿ ಕುವೆಂಪು ಬರೆದ ನಾಡಗೀತೆಯನ್ನು ತಿರುಚಿ ಅಪಮಾನ ಮಾಡಿದ ಹಾಗೂ ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ರೋಹಿತ್ ಚಕ್ರತೀರ್ಥರನ್ನು ಕೂಡಲೇ ಬಂದಿಸಬೇಕು ಹಾಗೂ ಆತನ ನೇತೃತ್ವದಲ್ಲಿ ನಡೆಯುತ್ತಿರುವ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯನ್ನು ಕೂಡಲೇ ವಜಾ ಮಾಡಬೇಕೆಂದು ಆಗ್ರಹಿಸಿ, ತೋಳಿಗೆ ಕಪ್ಪುಪಟ್ಟಿ ಧರಿಸಿ, ರಾಜ್ಯ ಒಕ್ಕಲಿಗರ ಸಂಘ, ಜಿಲ್ಲಾ ಒಕ್ಕಲಿಗರ ಸಂಘದಿಂದಿಂದ ಪ್ರತಿಭಟನೆ ನಡೆಸಲಾಯಿತು.

ಪಠ್ಯ ಪುಸ್ತಕವಾಯ್ತು, ಈಗ ಸರ್ಕಾರಿ ಕಾರ್ಯಕ್ರಮಗಳಿಗೂ ರೋಹಿತ್ ಚಕ್ರತೀರ್ಥ ಪ್ರಮುಖ ಅತಿಥಿ!
ನಗರದ ಬಾಲಗಂಗಾಧರನಾಥ ಸ್ವಾಮೀಜಿ ವೃತ್ತದಲ್ಲಿ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹನುಮಂತರಾಯಪ್ಪ ಅವರ ನೇತೃತ್ವದಲ್ಲಿ ಒಕ್ಕಲಿಗ ಸಮುದಾಯುದ ಮುಖಂಡರು, ಸಾಹಿತಿಗಳು, ಪ್ರಗತಿಪರರು ಪಾಲ್ಗೊಂಡು ರೋಹಿತ್ ಚರ್ಕತೀರ್ಥ ವಿರುದ್ದ ಘೋಷಣೆ ಕೂಗಿದರು.
ಈ ವೇಳೆ ಮಾತನಾಡಿದ ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ ಹನುಮಂತರಾಯಪ್ಪ, ಇಡೀ ನಾಡು ಕುವೆಂಪು ಅವರನ್ನು ರಾಷ್ಟ್ರಕವಿ ಎಂದು ಒಪ್ಪಿಕೊಂಡಿದೆ. ಅವರು ನೀಡಿದ ವಿಶ್ವಮಾನವ ಸಂದೇಶವನ್ನು ಇಡೀ ಪ್ರಪಂಚವೇ ಗೌರವಿಸುತ್ತಿರುವ ಸಂದರ್ಭದಲ್ಲಿ ರೋಹಿತ ಚರ್ಕತೀರ್ಥ ಎಂಬ ವ್ಯಕ್ತಿ, ಕುವೆಂಪು ಬರೆದ ನಾಡಗೀತೆಯನ್ನು 2017ರಲ್ಲಿ ತಿರುಚಿ, ಕೆಟ್ಟ ಅರ್ಥ ಬರುವಂತೆ, ಒಂದು ಪಕ್ಷಕ್ಕೆ, ಸಮುದಾಯಕ್ಕೆ ಸಿಮೀತ ಎಂಬಂತೆ ಬಿಂಬಿಸಿರುವುದು ನಾಚಿಕೇಗೇಡಿನ ಸಂಗತಿ, ಇದನ್ನು ರಾಜ್ಯ ಒಕ್ಕಲಿಗರ ಸಂಘ ಖಂಡಿಸುತ್ತದೆ. ರಾಜ್ಯ ಸರಕಾರ ಕೂಡಲೇ ಈತನನ್ನು ಬಂಧಿಸಿ, ಗಡಿಪಾರು ಮಾಡಬೇಕು, ಹಾಗೆಯೇ ಈತನ ನೇತೃತ್ವದಲ್ಲಿ ನಡೆಯುತ್ತಿರುವ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯನ್ನು ವಜಾ ಮಾಡಬೇಕೆಂಬುದು ನಮ್ಮ ಆಗ್ರಹವಾಗಿದೆ. ಒಂದು ವೇಳೆ ಸರಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಇಡೀ ರಾಜ್ಯದಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದರು.

ತುಮಕೂರಿನ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ತುಮಕೂರು ಜಿಲ್ಲಾ ಒಕ್ಕಲಿಗರ ವಿಧ್ಯಾಭಿವೃದ್ದಿ ಸಂಘದ ಆರ್.ಕಾಮರಾಜು, ಸಾಹಿತಿ ಜಿ.ವಿ ಆನಂದಮೂರ್ತಿ ಮಾತನಾಡಿ, ಮುಖಂಡರಾದ ಕಲ್ಲಹಳ್ಳಿ ದೇವರಾಜು, ಮನೋಹರಗೌಡ, ಕೃಷ್ಣಯ್ಯ, ವಿಶ್ವೇಶ್ವರಯ್ಯ, ಶಿವಕುಮಾರ ಭೀಮಸಂದ್ರ, ಮಾಜಿ ಉಪಮೇಯರ್ ಟಿ.ಆರ್.ನಾಗರಾಜು, ಕೆ.ರಂಗಪ್ಪ, ಬಾಲರಾಜು, ಹೊನ್ನೇಗೌಡ, ಭೈರವೇಶ್ವರ ಬ್ಯಾಂಕಿನ ಅಧ್ಯಕ್ಷ ವೆಂಕಟೇಶಬಾಬು, ಪಾಲಿಕೆ ಸದಸ್ಯ ಧರಣೇಂದ್ರ ಕುಮಾರ್, ಶಂಕರ್, ಹನುಮಂತ, ವೀರಕ್ಯಾತಯ್ಯ, ಆರ್.ರಂಗಪ್ಪ, ಜಯರಾಮಯ್ಯ, ಗಂಗನರಸೇಗೌಡ, ಟೂಡಾ ಮಾಜಿ ಅಧ್ಯಕ್ಷ ಸಿದ್ದಲಿಂಗೇಗೌಡ, ನಾಗಭೂಷಣ್, ಕಮಲ ರಂಗಯ್ಯ, ಶ್ರೀನಿಧಿ ರಾಜಣ್ಣ, ಶ್ರೀಧರ್, ಆನಂದ್, ಆಟೋ ರಾಜು, ನಾಗರಾಜು, ರಾಮಣ್ಣ, ರಾಮಕೃಷ್ಣ, ಸಿದ್ದರಾಜುಗೌಡ, ದೊಡ್ಡಲಿಂಗಪ್ಪ, ಬೆಳ್ಳಿಲೋಕೇಶ್, ಸುಜಾತ ನಂಜೇಗೌಡ, ಸುನಂದಮ್ಮ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಿದ್ಯಾರ್ಥಿ ಬಸ್ ಪಾಸ್ ಗೆ ಏನೇನು ದಾಖಲೆಗಳು ಬೇಕು?; ಇಲ್ಲಿದೆ ಮಾಹಿತಿ

About The Author

You May Also Like

More From Author

+ There are no comments

Add yours