ರೈತರ ಸಮಸ್ಯೆ ಬಗ್ಗೆ ನಾವ್ಯಾರೂ ಮಾತನಾಡುತ್ತಿಲ್ಲ; ಬಿಜೆಪಿ ಸಭೆಯಲ್ಲಿ ಮಾಧುಸ್ವಾಮಿ ಬೇಸರ

1 min read

 

Tumkurnews
ತುಮಕೂರು; ರೈತರ ಮಧ್ಯೆ ಸಾಕಷ್ಟು ಸಮಸ್ಯೆಗಳಿವೆ. ಅದರ ಬಗ್ಗೆ ನಾವ್ಯಾರೂ ಕೂತು ಚರ್ಚೆ ಮಾಡುತ್ತಿಲ್ಲ. ರೈತರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕಾಗಿದೆ. ಆಗ ಮಾತ್ರ ಜನಪ್ರತಿನಿಧಿಗಳು ರಾಜಕೀಯವಾಗಿ ಯಶಸ್ವಿಯಾಗಲು ಸಾಧ್ಯ ಎಂದು ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದರು.

ಬಿಜೆಪಿ, ಜೆಡಿಎಸ್ ಪಕ್ಷಗಳಿಂದ ಸಾಮಾಜಿಕ ನ್ಯಾಯ ಸಿಗುವುದಿಲ್ಲ; ಕುರುಬರ ಸಮಾವೇಶದಲ್ಲಿ ಸಿದ್ದರಾಮಯ್ಯ
ನಗರದ ರಿಂಗ್ ರಸ್ತೆಯಲ್ಲಿರುವ ಆರ್.ಎಸ್. ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಪಕ್ಷದಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳುವುದು ಯಶಸ್ಸಿನ ಮೂಲ. ಇದರೊಂದಿಗೆ ಗ್ರಾಮೀಣರ ಬದುಕು, ಕೃಷಿ ಬದುಕನ್ನು ಅರ್ಥ ಮಾಡಿಕೊಳ್ಳಬೇಕು, ಸಣ್ಣ ಸಣ್ಣ ರೈತರ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಬೇಕು. ಈ ಸಂಬಂಧ ಸರ್ಕಾರಕ್ಕೂ ಆಗಿಂದಾಗ್ಗೆ ಸಲಹೆ ಕೊಡಬೇಕು. ಈ ಮೂಲಕ ರೈತರ ಸಮಸ್ಯೆಯನ್ನು ಒಂದೊಂದೇ ಈಡೇರಿಸಲು ಮುಂದಾದರೆ ಸರ್ಕಾರಕ್ಕೂ ಬಹಳ ಸಹಾಯವಾಗುತ್ತದೆ ಎಂದು ಸಲಹೆ ನೀಡಿದರು.
ಸೋತಾಗ ರೈತರ ಸಮಸ್ಯೆಗಳ ಬಗ್ಗೆ ಎಲ್ಲರೂ ಮಾತನಾಡುತ್ತೇವೆ. ಆದರೆ ಗೆದ್ದಾಗ ಅದನ್ನು ಬಗೆಹರಿಸಲು ಯಾರೂ ಮುಂದಾಗುತ್ತಿಲ್ಲ. ರಾಜಕೀಯವಾಗಿ ಸೃಷ್ಠಿಯಾಗುವ ಸಮಸ್ಯೆಗಳನ್ನು ಬಗೆಹರಿಸುವುದು ಕಷ್ಟ. ಆದರೆ ನೈಜವಾಗಿರುವ ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ಮಾಡಬಹುದು. ಈ ನಿಟ್ಟಿನಲ್ಲಿ ನಾವೆಲ್ಲರೂ ಕಾರ್ಯೋನ್ಮುಖರಾಗೋಣ ಎಂದರು.

ನ್ಯಾಯಾಂಗವನ್ನು ಬಿಜೆಪಿ ಪಕ್ಷ ನಡೆಸುವುದಿಲ್ಲ; ಡಿಕೆಶಿಗೆ ಬಿಜೆಪಿ ಟಾಂಗ್
ಬೆಳೆ ವಿಮೆ ನೀಡುವಲ್ಲಿ ಇನ್ಸುರೆನ್ಸ್ ನಲ್ಲಿ ಕಂಪೆನಿ ಮತ್ತು ನಮ್ಮ ಕಡೆಯಿಂದ ದೊಡ್ಡ ತೊಂದರೆಯೇನು ಆಗುವುದಿಲ್ಲ. ಆದರೆ ಬ್ಯಾಂಕ್‍ಗಳಿಂದಲೇ ಸಮಸ್ಯೆಯಾಗುತ್ತಿದೆ. ಒಂದು ವರ್ಷದ ಕಾರ್ಯಕ್ರಮದಲ್ಲಿ ಶೇ. 30 ರಷ್ಟು ಬೆಳೆ ಸಾಲ ಕೊಡಲಾಗುತ್ತಿಲ್ಲ. ಇದಕ್ಕೆ ಪಹಣಿಗಳ ಬೆಳೆ ಕಾಲಂನಲ್ಲಿ ಬೆಳೆ ಬಗ್ಗೆ ನಮೂದು ಆಗಿ ಬರೀ ಸೊನ್ನೆ ಸೊನ್ನೆ ಮುದ್ರಿತವಾಗಿರುವುದೇ ದೊಡ್ಡ ಸಮಸ್ಯೆಯಾಗುತ್ತಿದೆ. ಈ ಸಮಸ್ಯೆಯನ್ನು ಅಧಿಕಾರಿಗಳು ಕಂಪ್ಯೂಟರ್ ಮೇಲೆ ಹಾಕುತ್ತಾರೆ. ಆದರೆ ಕಂಪ್ಯೂಟರ್‌ಗೆ ಲೋಡ್ ಮಾಡುವವರು ಯಾರು ಎಂಬುದರ ಬಗ್ಗೆ ಅಧಿಕಾರಿಗಳು ಆತ್ಮಾವಲೋಕ ಮಾಡಿಕೊಳ್ಳುವುದೇ ಇಲ್ಲ. ಇದನ್ನೆಲ್ಲ ಗಮನಿಸಿದರೆ ರೈತರದ್ದು ದುರ್ದೈವದ ಬದುಕಾಗಿದೆ ಎಂದರು.

ತುಮಕೂರಿನ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮಾತನಾಡಿ, ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮಹಿಳೆಯರಿಗೆ ಶೇ. 50 ರಷ್ಟು ಮೀಸಲಾತಿ ಕೊಡಲಾಗುತ್ತಿದೆ. ಒಟ್ಟು ಜನಸಂಖ್ಯೆಯ ಶೇ. 48 ರಷ್ಟು ಮಹಿಳೆಯರು ಕೃಷಿ ಬದುಕಿನಲ್ಲಿ ತೊಡಗಿಕೊಂಡಿದ್ದಾರೆ. ಆದರೆ ರಾಜಕೀಯವಾಗಿ ಮಹಿಳೆಯರನ್ನು ಬೆಳೆಸುವ ಕಾರ್ಯ ಆಗಬೇಕಾಗಿದೆ ಎಂದರು.
ರಾಜ್ಯದಲ್ಲಿ 65 ಸಾವಿರ ಬೂತ್‍ಗಳ ಸಂಖ್ಯೆಯಿದ್ದು, ಸುಮಾರು ಒಂದೂವರೆ ಲಕ್ಷ ಮಹಿಳೆಯರನ್ನು ಸದಸ್ಯತ್ವ ಗುರಿಯನ್ನು ಹೊಂದಲಾಗಿದೆ ಎಂದು ಅವರು ಹೇಳಿದರು.
ರೈತ ಮೋರ್ಚಾ ಸಂಘಟನೆಗಳಲ್ಲಿ ಖಾಲಿ ಇರುವ ಪದಾಧಿಕಾರಿಗಳ ಹುದ್ದೆಗಳಿಗೆ ನೇಮಕ ಮಾಡಲು ಕ್ರಮ ಕೈಗೊಳ್ಳಬೇಕು ಎಂದರು.
ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್. ಶಿವಪ್ರಸಾದ್, ಶಾಸಕ ಜ್ಯೋತಿಗಣೇಶ್, ವಿಧಾನ ಪರಿಷತ್ ಸದಸ್ಯ ನವೀನ್, ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್. ಶಿವಪ್ರಸಾದ್, ಬಿ.ಕೆ ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.

About The Author

You May Also Like

More From Author

+ There are no comments

Add yours