ಶಿಕ್ಷಣ ಸಚಿವ ನಾಗೇಶ್ ಮನೆಗೆ ಬೆಂಕಿ ಹಚ್ಚುವ ಯತ್ನ; 15 ಮಂದಿ ಪೊಲೀಸ್ ವಶಕ್ಕೆ

1 min read

 

Tumkurnews
ತುಮಕೂರು; ಶಿಕ್ಷಣ ಸಚಿವ ಬಿ.ಸಿ ನಾಗೇಶ್ ನಿವಾಸದ ಎದುರು ಪ್ರತಿಭಟನೆ ನಡೆಸಿ, ಬೆಂಕಿ ಹಚ್ಚಲು ಯತ್ನಿಸಿದ ಆರೋಪದ ಮೇಲೆ 15 ಮಂದಿ ಎನ್.ಎಸ್.ಯು.ಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತಿಪಟೂರು ನಗರದಲ್ಲಿನ ಬಿ.ಸಿ ನಾಗೇಶ್ ನಿವಾಸದ ಎದುರು ‌ಬುಧವಾರ ಎನ್.ಎಸ್.ಯು.ಐ ಕಾರ್ಯಕರ್ತರು‌ ಪ್ರತಿಭಟನೆ ನಡೆಸುತ್ತಿದ್ದರು. ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಎನ್.ಎಸ್.ಯು.ಐ ಕಾರ್ಯಕರ್ತರು ಸಚಿವ ಬಿ.ಸಿ‌ ನಾಗೇಶ್ ನಿವಾಸಕ್ಕೆ ಏಕಾಏಕಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪ್ರತಿಭಟನಾಕಾರರು ನಾಗೇಶ್ ‌ನಿವಾಸಕ್ಕೆ ಬೆಂಕಿ ಹಚ್ಚುವ ಪ್ರಯತ್ನ ಮಾಡಿದ್ದಾರೆ ಎಂದು ಸ್ವತಃ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.‌
ಪ್ರಕರಣದ ಕುರಿತು ತುಮಕೂರಿನಲ್ಲಿ ದಿಢೀರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಶಿಕ್ಷಣ ಸಚಿವ ಬಿ.ಸಿ ನಾಗೇಶ್ ನಿವಾಸಕ್ಕೆ ನುಗ್ಗಿದ ಕೆಲವು ಎನ್.ಎಸ್.ಯು.ಐ ಕಾರ್ಯಕರ್ತರು ಏಕಾಏಕಿ ಮನೆಗೊಳಗೆ ನುಗ್ಗಿದ್ದಾರೆ. ನನಗೆ ತಿಳಿದಿರುವ ಮಾಹಿತಿ ಪ್ರಕಾರ ಅಲ್ಲಿ ಬೆಂಕಿ ಹಚ್ಚುವ ಪ್ರಯತ್ನ ನಡೆದಿದೆ. ಈಗಾಗಲೇ ಪೊಲೀಸರು 15 ಮಂದಿ ಹಾಗೂ 2 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಕೃತ್ಯವನ್ನು ನಾನು ಖಂಡಿಸುತ್ತೇನೆ, ಈ ಗುಂಡಾವರ್ತನೆಯನ್ನು ನಾವು ಸಹಿಸುವುದಿಲ್ಲ. ಇದಕ್ಕೆ ತಕ್ಕ ಪಾಠವನ್ನು ಅವರು ಕಲಿಯಬೇಕಾಗುತ್ತದೆ” ಎಂದರು.

ಪಠ್ಯ ಪುಸ್ತಕ ವಿಚಾರದಲ್ಲಿ ಅಸಹಿಷ್ಣುತೆ ಮೇರೆ ಮೀರುತ್ತಿದೆ; ಆರಗ ಜ್ಞಾನೇಂದ್ರ
ಬೆಂಗಳೂರಿನಿಂದ ಐದು ಜನ ಬಂದಿದ್ದಾರೆ, ಭದ್ರಾವತಿಯಿಂದ ಓರ್ವ, ಚಿಕ್ಕಮಗಳೂರಿನಿಂದ ಇಬ್ಬರು, ದಾವಣಗೆರೆಯಿಂದ ಮೂವರು, ಹಾಸನದಿಂದ ಮೂವರು ಹಾಗೂ ತುಮಕೂರಿನ ಓರ್ವ ಕೃತ್ಯದಲ್ಲಿ ಪಾಲ್ಗೊಂಡಿದ್ದು, ಇವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಪ್ಪಿಸಿಕೊಂಡು ಓಡಿಹೋದವರನ್ನು ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ರೋಹಿತ್ ಚಕ್ರತೀರ್ಥ ವಿರುದ್ಧ ತೀವ್ರಗೊಂಡ ಆಕ್ರೋಶ; ಒಕ್ಕಲಿಗರ ಪ್ರತಿಭಟನೆ

About The Author

You May Also Like

More From Author

+ There are no comments

Add yours