ಪೊಲೀಸ್ ಪಡೆಯಲ್ಲಿ ಖಾಲಿ ಇರುವ ಹೆಡ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸ್ಟಾಫ್ ಸೆಲೆಕ್ಷನ್ ಕಮಿಷನ್(ಎಸ್.ಎಸ್.ಸಿ) ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ತುಮಕೂರಿನ ವಿವಿಧ ನ್ಯಾಯಾಲಯಗಳಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಆರಂಭ
ವಿದ್ಯಾರ್ಹತೆ; ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಯೋಮಿತಿ; ಜೂನ್ 2022ಕ್ಕೆ ಅನ್ವಯವಾಗುವಂತೆ ಕನಿಷ್ಠ 18, ಗರಿಷ್ಠ 25 ವಯಸ್ಸಿನವರಾಗಿರಬೇಕು, ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ತುಮಕೂರು ಶಿಕ್ಷಣ ಇಲಾಖೆಯಲ್ಲಿ ಉದ್ಯೋಗ; ಇಂದೇ ಅರ್ಜಿ ಸಲ್ಲಿಸಿ
ಅರ್ಜಿ ಶುಲ್ಕ; ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 100, ಎಸ್ಸಿ, ಎಸ್ಟಿ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಕೊನೆ ದಿನಾಂಕ; ಅರ್ಜಿ ಸಲ್ಲಿಸಲು 16-06-2022 ಕೊನೆಯ ದಿನಾಂಕವಾಗಿದ್ದು, ವೆಬ್ ಸೈಟ್ https://SSC.nic.in ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
+ There are no comments
Add yours