ತಲೆ ಮೇಲೆ ಯಾರ್ಯಾರದ್ದೋ ಚಡ್ಡಿ ಹೊತ್ತ ನಾರಾಯಣಸ್ವಾಮಿ; ಸಿದ್ದರಾಮಯ್ಯ ಮರುಕ

1 min read

ಬೆಂಗಳೂರು; ಚಡ್ಡಿಯ ಬಾಕ್ಸ್ ತಲೆಯ ಮೇಲೆ ಹೊತ್ತು ಸಾಗಿದ ಛಲವಾದಿ ನಾರಾಯಣ ಸ್ವಾಮಿ ಅವರ ವರ್ತನೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮರುಕ ವ್ಯಕ್ತಪಡಿಸಿದ್ದಾರೆ.

ಶಿಕ್ಷಣ ಸಚಿವ ನಾಗೇಶ್ ಮನೆಗೆ ಬೆಂಕಿ ಹಚ್ಚುವ ಯತ್ನ; 15 ಮಂದಿ ಪೊಲೀಸ್ ವಶಕ್ಕೆ
ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, “ನಿಮ್ಮ ಸಂಘದ ಉನ್ನತ ಪದಾಧಿಕಾರಿಗಳಲ್ಲಿ ದಲಿತರು ಮತ್ತು ಹಿಂದುಳಿದ‌ ಜಾತಿಗಳು ಯಾಕೆ ಇಲ್ಲ” ಎನ್ನುವ ನನ್ನ ಪ್ರಶ್ನೆಗೆ ಆರ್.ಎಸ್.ಎಸ್ ನವರು ಬಿಜೆಪಿ ಶಾಸಕ ಛಲವಾದಿ ನಾರಾಯಣ ಸ್ವಾಮಿಯವರ ಮೂಲಕ ಉತ್ತರ ನೀಡಿದ್ದಾರೆ. ಈ‌ ಸಂದೇಶವನ್ನು ಬಿಜೆಪಿಯಲ್ಲಿರುವ ದಲಿತ ಬಂಧುಗಳು ಅರ್ಥ ಮಾಡಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

ಸಚಿವ ಬಿ.ಸಿ ನಾಗೇಶ್ ಮನೆ ಎದುರು ನಿಜಕ್ಕೂ ನಡೆದಿದ್ದೇನು?; ಇಲ್ಲಿದೆ ವಿಡಿಯೋ

ಆರ್.ಎಸ್.ಎಸ್‌ ಗೆ ಬೆಂಬಲ ನೀಡಲು ಹಳೆ ಚಡ್ಡಿ ಹೊತ್ತು ಕೊಂಡು ಮೆರವಣಿಗೆ ಮಾಡಿದ ನಾರಾಯಣಸ್ವಾಮಿಯವರೇ, ನಿಮ್ಮ ಸ್ಥಾನಮಾನ ಏನಿದ್ದರೂ ಇಷ್ಟಕ್ಕೆ ಸೀಮಿತ. ಆ ಸಂಘದ ಉನ್ನತ ಪದಾಧಿಕಾರಕ್ಕೆ ನೀವು ಸದಾ ಅಸ್ಪೃಶ್ಯ ನೆನಪಿರಲಿ. ಯಾರ್ಯಾರದೋ ಹಳೆ ಚಡ್ಡಿ ಹೊತ್ತುಕೊಂಡ ನಿಮ್ಮನ್ನು ಕಂಡು‌‌ ಮನಸ್ಸಿಗೆ ನೋವಾಯಿತು. ನಿಮ್ಮನ್ನು “ಪಠ್ಯಪುಸ್ತಕ‌ ಪರಿಷ್ಕರಣ‌ ಸಮಿತಿಯ ಅಧ್ಯಕ್ಷತೆ” ಯಂತಹ ಸ್ಥಾನದಲ್ಲಿ‌‌ ಕಾಣುವ ಆಸೆ ನನಗೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ತುಮಕೂರು ಜೈಲಿಗೆ ಡಿ.ಕೆ ಶಿವಕುಮಾರ್ ಭೇಟಿ; ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ
ನಿಮ್ಮ ಪ್ರತಿಭಟನೆಯ ಹಕ್ಕನ್ನು ನಾನು ಗೌರವಿಸುತ್ತೇನೆ. ಆದರೆ ಕೇವಲ ರಾಜಕೀಯ ಜಿದ್ದಾಜಿದ್ದಿಗಾಗಿ ಹಳೆಚಡ್ಡಿ ಹೊತ್ತುಕೊಳ್ಳಲೂ ಸಿದ್ಧರಾದ ನಿಮ್ಮ ಗುಲಾಮಿ‌ ಮನಸ್ಥಿತಿಗೆ ನನ್ನ ಧಿಕ್ಕಾರ. ಸ್ವಾಭಿಮಾನವನ್ನು‌ ಉಸಿರಾಗಿಸಿಕೊಂಡು ಬದುಕಿದ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಸ್ವಲ್ಪ ಓದಿ ಸ್ವಾಭಿಮಾನದ ಪಾಠ ಕಲಿಯಬೇಕೆಂದಷ್ಟೇ ‌ನಿಮಗೆ‌ ನಾನು ನೀಡುವ ಸಲಹೆ ಎಂದು‌ ಸಿದ್ದರಾಮಯ್ಯ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

NSUI ಕಾರ್ಯಕರ್ತರ ಬಂಧನಕ್ಕೆ ಪರಮೇಶ್ವರ್ ತೀವ್ರ ಅಸಮಧಾನ

About The Author

You May Also Like

More From Author

+ There are no comments

Add yours