Tumkur News
ತುಮಕೂರು: ಕೌಟುಂಬಿಕ ದೌರ್ಜನ್ಯ ಮಹಿಳೆಯರ ಸಂರಕ್ಷಣಾ ಕಾಯ್ದೆ-2005ರಡಿ ಜನವರಿ 2022ರಿಂದ ಮಾರ್ಚ್ 2022ರವರೆಗೆ 55 ಪ್ರಕರಣಗಳು ಸೇರಿದಂತೆ ಒಟ್ಟು 120 ಪ್ರಕರಣಗಳು ದಾಖಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ್ ತಿಳಿಸಿದರು.
ತುಮಕೂರು ಜಿಲ್ಲೆಯಲ್ಲಿ ಒಂದೇ ವರ್ಷದಲ್ಲಿ 111 ಬಾಲೆಯರಿಗೆ ಕಂಕಣ ಕಂಟಕ!
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯಲ್ಲಿ ಮಾತನಾಡಿದರು.
ಜಾತ್ರೆ, ಉತ್ಸವ, ಹಬ್ಬ, ಜಯಂತಿಗಳ ಮೇಲೆ ಜಿಲ್ಲಾಡಳಿತದ ಹದ್ದಿನ ಕಣ್ಣು!; ಏಕೆ, ಏನಾಯಿತು?
ದಾಖಲಾದ 120 ಪ್ರಕರಣಗಳಲ್ಲಿ 50 ಪ್ರಕರಣಗಳನ್ನು ಸಮಾಲೋಚನೆ ಮೂಲಕ ಇತ್ಯರ್ಥ ಪಡಿಸಲಾಗಿದ್ದು, ವರ್ಷಾಂತ್ಯದಲ್ಲಿ ಸಂರಕ್ಷಣಾಧಿಕಾರಿ ಹಂತದಲ್ಲಿ 34 ಹಾಗೂ ನ್ಯಾಯಾಲಯ ಹಂತದಲ್ಲಿ 36 ಸೇರಿ ಒಟ್ಟು 70 ಪ್ರಕರಣಗಳು ಬಾಕಿ ಇವೆ ಎಂದು ಹೇಳಿದರು.
ಇಸಿಐಎಲ್ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸಾಂತ್ವಾನ ಕೇಂದ್ರದಲ್ಲಿ 517 ಪ್ರಕರಣ: ಸಾಂತ್ವಾನ ಕೇಂದ್ರಗಳಲ್ಲಿ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ಒಟ್ಟು 517 ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ 497 ಪ್ರಕರಣಗಳನ್ನು ಸಮಾಲೋಚನೆ ಮೂಲಕ ಇತ್ಯರ್ಥಗೊಳಿಸಲಾಗಿದೆ. ಇನ್ನು 20 ಪ್ರಕರಣಗಳು ಬಾಕಿ ಇವೆ ಎಂದು ಹೇಳಿದರು.
ಸಖಿ ಒನ್ ಸ್ಟಾಫ್ ಸೆಂಟರ್ ಯೋಜನೆಯಡಿ 234 ಪ್ರಕರಣ: ಸಖಿ ಒನ್ ಸ್ಟಾಫ್ ಸೆಂಟರ್ ಯೋಜನೆಯಡಿ 234 ಪ್ರಕರಣ: 2021-22ನೇ ಸಾಲಿನಲ್ಲಿ ಒಟ್ಟು 234 ಪ್ರಕರಣ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆಯಡಿ ತುಮಕೂರು ಜಿಲ್ಲೆಯಲ್ಲಿ ಈ ವರ್ಷದ ಜನವರಿಯಿಂದ ಮಾರ್ಚ್ ಅಂತ್ಯದವರೆಗೆ ಒಟ್ಟು 28 ಪ್ರಕರಣಗಳು ದಾಖಲಾಗಿವೆ.
+ There are no comments
Add yours