ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆ ಕಂದಾಯ ಸಚಿವ ಅಶೋಕ್

1 min read

 

Tumkur News
ತುಮಕೂರು: ಸರ್ಕಾರದ ಬಹು ನಿರೀಕ್ಷಿತ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಜೂ. 18ರಂದು ಜಿಲ್ಲೆಯ ತುರುವೇಕೆರೆ ತಾಲ್ಲೂಕು ಮಾಯಸಂದ್ರ ಗ್ರಾಮದಲ್ಲಿ ನಡೆಯಲಿದ್ದು, ಕಂದಾಯ ಸಚಿವ ಆರ್.ಅಶೋಕ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ತಿಳಿಸಿದರು.

3 ವರ್ಷಗಳ ಹಿಂದೆ ಮಹಿಳೆಯನ್ನು ಸುಟ್ಟು ಕೊಲೆ ಮಾಡಿದ್ದ ಆರೋಪಿಗಳ ಬಂಧನ!

ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಇಂದು ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಕಂದಾಯ ಸಚಿವರು ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

KEA ಹುದ್ದೆಗಳಿಗೆ ಅರ್ಜಿ ಆಹ್ವಾನ; 1 ಲಕ್ಷ ವರೆಗೆ ವೇತನ!
ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಲು ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಎಲ್ಲಾ ಇಲಾಖೆಗಳು ತಮ್ಮ ಇಲಾಖೆಯ ಪ್ರಯೋಜನಗಳನ್ನು ತಿಳಿಸಲು 30ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆದು ಮಾಹಿತಿ ನೀಡಬೇಕಲ್ಲದೇ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆತರಬೇಕು ಎಂದು ಸೂಚಿಸಿದರು.

You May Also Like

More From Author

+ There are no comments

Add yours