3 ತಿಂಗಳಿಗೊಮ್ಮೆ ಪೌರ ಕಾರ್ಮಿಕರಿಗೆ ಆರೋಗ್ಯ ತಪಾಸಣೆ: ರೇಣುಕಾ

1 min read

 

Tumkur News
ತುಮಕೂರು: ಸ್ಥಳೀಯ ನಗರ ಸಂಸ್ಥೆಗಳಲ್ಲಿ ಪೌರ ಕಾಮಿಕರಿಗೆ 3 ತಿಂಗಳಿಗೊಮ್ಮೆ ವಿವಿಧ ತಜ್ಞರ ತಂಡದೊಂದಿಗೆ ಪೌರ ಕಾಮಿಕರ ಆರೋಗ್ಯವನ್ನು ತಪಾಸಣೆ ಮಾಡಿಸಬೇಕು. ಗೃಹಭಾಗ್ಯ ಯೋಜನೆಯಡಿ ಪೌರ ಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸಬೇಕು ಹಾಗೂ ಶೌಚಾಲಯಗಳನ್ನು ಸ್ಯಾನಿಟರಿ ಶೌಚಾಲಯಗಳನ್ನಾಗಿ ಪರಿವರ್ತಿಸಬೇಕು ಎಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದರು.

ರಾಹುಲ್ ಗಾಂಧಿ ಮೇಲಿನ ಆರೋಪ ಸಾಬೀತಾದರೆ, ಎಲ್ಲರಂತೆ ಶಿಕ್ಷೆ; ಬಿ.ಎಸ್.ವೈ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಬುಧವಾರ ಆಯೋಜಿಸಲಾಗಿದ್ದ, ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‍ಗಳ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಅಧಿನಿಯಮ 2013ರ ಕಾಯ್ದೆ ಹಾಗೂ ನಿಯಮಗಳ ಕುರಿತ ಸಭೆಯಲ್ಲಿ ಮಾತನಾಡಿದರು.

ಮಲ ಹೊರುವಂತಹ ಅನಿಷ್ಟ ಪದ್ಧತಿ ನಿರ್ನಾಮವಾಗಬೇಕು: ಎಂ.ಶಿವಣ್ಣ

ತುಮಕೂರು ಮಹಾನಗರಪಾಲಿಕೆಯಿಂದ ನಗರ ನೈರ್ಮಲ್ಯದ ಹಿತದೃಷ್ಟಿಯಿಂದ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳುತ್ತಿದ್ದು, ಪೌರ ಕಾರ್ಮಿಕರಿಗೆ ಕೆಲಸದ ಮದ್ಯೆ ಹಸಿವು ನೀಗಲು ಗುಣಮಟ್ಟದ ಉಪಹಾರ ಮತ್ತು ಕುಡಿಯುವ ನೀರಿನ ವ್ಯವಸ್ಥೆಯನ್ನು  ಮಾಡಿ ಎಂದು ಹೇಳಿದರು.

ಕುಣಿಗಲ್ ಮತ್ತು ಚಿ.ನಾ. ಹಳ್ಳಿಯಲ್ಲಿ ಪೌರ ಕಾರ್ಮಿಕರ ಮೇಲೆ ಅಮಾನವೀಯ ವರ್ತನೆ!

ಪೌರಕಾಮಿಕರಿಗೆ ಇ.ಎಸ್.ಐ. ಮತ್ತು ಪಿ.ಎಫ್. ಸೌಲಭ್ಯ ಕಲ್ಪಿಸಿ ಸೂಕ್ತ ದಾಖಲಾತಿಗಳೊಂದಿಗೆ ವರದಿ ಮಾಡಬೇಕು. ಪೌರ ಕಾರ್ಮಿಕರಿಗೆ ಸಾಂಕ್ರಾಮಿಕ ರೋಗಗಳಿಂದ ಸಂರಕ್ಷಿಸಲು ಗಂ ಬೂಟ್ಸ್, ಹ್ಯಾಂಡ್ ಗ್ಲೌಸ್, ಮಾಸ್ಕ್ ಸೇರಿದಂತೆ ಮತ್ತಿತರ ಗುಣಮಟ್ಟದ ಸಾಮಗ್ರಿಗಳನ್ನು ಖರೀದಿಸಿ ವಿತರಿಸಲು ಸೂಚಿಸಿದರು.

About The Author

You May Also Like

More From Author

+ There are no comments

Add yours