ಕೋವಿಡ್ ಉಲ್ಬಣವಾಗದಂತೆ ಕಟ್ಟೆಚ್ಚರ; ಆರಗ

1 min read

 

Tumkur News
ತುಮಕೂರು: ತುಮಕೂರು ಜಿಲ್ಲೆಯಲ್ಲಿ ಕೊರೋನಾ ಪ್ರಕರಣ ಹೆಚ್ಚಾಗದಂತೆ ಕಟ್ಟೆಚ್ಚರ ವಹಿಸಬೇಕು. ಆರೋಗ್ಯ ಇಲಾಖೆ ಈ ಬಗ್ಗೆ ಹೆಚ್ಚು ನಿಗಾ ವಹಿಸಿ, ಕೋವಿಡ್-19 ತಪಾಸಣೆಯನ್ನು 500ಕ್ಕೆ ಹೆಚ್ಚಿಸಬೇಕು. ಎಲ್ಲಾ ತಾಲ್ಲೂಕಿನಲ್ಲಿಯೂ ಕಣ್ಗಾವಲು ಸಮಿತಿ ರಚಿಸುವಂತೆ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಅರಗ ಜ್ಞಾನೇಂದ್ರ ಅವರು ಆರೋಗ್ಯ ಇಲಾಖೆ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

3 ತಿಂಗಳಿಗೊಮ್ಮೆ ಪೌರ ಕಾರ್ಮಿಕರಿಗೆ ಆರೋಗ್ಯ ತಪಾಸಣೆ: ರೇಣುಕಾ

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಹಿರಿಯ ಅಧಿಕಾರಿಗಳೊಂದಿಗೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಸರ್ಕಾರದ ಮಾರ್ಗಸೂಚಿಯಂತೆ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಪ್ರತಿಯೊಬ್ಬರು ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಮತ್ತು ಶುಚಿತ್ವ ಪಾಲಿಸಬೇಕು ಎಂದರು.

ಆರಗ ಜ್ಞಾನೇಂದ್ರ ಕಾರಿಗೆ ಡಿ.ಎಸ್.ಎಸ್. ಕಾರ್ಯಕರ್ತರ ಮುತ್ತಿಗೆ!

ಕೋವಿಡ್-೧೯ ತಡೆಗಟ್ಟಲು ಜಿಲ್ಲಾಡಳಿತ ಸಿದ್ಧತೆ ಕೈಗೊಳ್ಳಬೇಕು ಮತ್ತು ಹೆಚ್ಚಿನ ಜನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. 60 ವರ್ಷ ಮೇಲ್ಪಟ್ಟವರಿಗೆ ಮುಂಜಾಗ್ರತಾ ಲಸಿಕೆಯನ್ನು ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

You May Also Like

More From Author

+ There are no comments

Add yours