Tumkur News
ತುಮಕೂರು: ತುಮಕೂರು ಜಿಲ್ಲೆಯ ಹಲವು ತಾಲೂಕಿನಲ್ಲಿ ಪೌರ ಕಾರ್ಮಿಕರಿಗೆ ಮೂಲ ಸಾಧನಗಳಿಲ್ಲದೆ ಅಮಾನವೀಯವಾಗಿ ನಡೆಸಿಕೊಳ್ಳುತ್ತಿದ್ದಾರೆ. ಅಂತಹವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರಾದ ಎಂ. ಶಿವಣ್ಣ ಸೂಚಿಸಿದರು.
ಮಲ ಹೊರುವಂತಹ ಅನಿಷ್ಟ ಪದ್ಧತಿ ನಿರ್ನಾಮವಾಗಬೇಕು: ಎಂ.ಶಿವಣ್ಣ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಬುಧವಾರ ಆಯೋಜಿಸಲಾಗಿದ್ದ, ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‍ಗಳ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಅಧಿನಿಯಮ 2013ರ ಕಾಯ್ದೆ ಹಾಗೂ ನಿಯಮಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅಧಿಕಾರಿಗಳಿಗೆ ಕಾಯ್ದೆಯ ಕುರಿತು ಮಾಹಿತಿ ನೀಡಿ, ಮಾತನಾಡಿದರು.
ಹಲವು ನಾಯಕರು ಬಿಜೆಪಿಗೆ ಬರಲು ತುದಿಗಾಲಲ್ಲಿ ನಿಂತಿದ್ದಾರೆ; ಬಿ.ಎಸ್.ವೈ.
ಕುಣಿಗಲ್ ತಾಲ್ಲೂಕಿನಲ್ಲಿ ಪೌರ ಕಾರ್ಮಿಕರಿಗೆ ಸುರಕ್ಷತಾ ಸಾಧನಗಳನ್ನು ನೀಡದೇ, ಸಮವಸ್ತ್ರ ನೀಡದೆ ಅಮಾನವೀಯವಾಗಿ ದುಡಿಸಿಕೊಳ್ಳಲಾಗುತ್ತಿದೆ. ಚಿ.ನಾ. ಹಳ್ಳಿಯಲ್ಲಿ 2011ರಿಂದ 2018ರವರೆಗೆ ಸುಮಾರು 60 ಲಕ್ಷ ಪಿ.ಎಫ್. ಹಣ ದುರ್ಬಳಕೆ ಆಗಿದೆ. ಇದಕ್ಕೆ ಕಾರಣರಾದ ಸಂಬಂಧಿಸಿದ ಮುಖ್ಯಾಧಿಕಾರಿ ಹಾಗೂ ಪರಿಸರ ಅಭಿಯಂತರರ ವಿರುದ್ಧ ಸೂಕ್ತ ಕ್ರಮಕ್ಕೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಸೂಚಿಸಲಾಯಿತು.
+ There are no comments
Add yours