ತುಮಕೂರು; ಕೆ.ಎಸ್.ಆರ್.ಟಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ತಿಪಟೂರು ತಾಲೂಕಿನ ಬಿದರೆಗುಡಿಯ ಮತ್ತಿಹಳ್ಳಿ ಬಳಿ ಘಟನೆ ಸಂಭವಿಸಿದೆ.
ಶಿವಮೊಗ್ಗದಿಂದ ಬೆಂಗಳೂರಿಗೆ ಹೋಗುತಿದ್ದ ಕೆ.ಎಸ್.ಆರ್ ಟಿ.ಸಿ ಬಸ್ ಹಾಗೂ ತುಮಕೂರಿನಿಂದ ಅರಸೀಕೆರೆಗೆ ಹೋಗುತಿದ್ದ ಕಾರಿನ ನಡುವೆ
ಮತ್ತಿಹಳ್ಳಿ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಅಪಾಯವಾಗಿಲ್ಲ. ಆದರೆ, ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ಸಿದ್ದರಾಜು (38) ಗುಬ್ಬಿ ಗೇಟ್, ರಿಂಗ್ ರೋಡ್, ತುಮಕೂರು, ಮೋಹನ್ (38) ಬೆಳ್ಳಾವಿ, ಮಹೇಶ್ (38) ಟಿ ಗೊಲ್ಲಹಳ್ಳಿ ಎಂದು ಗುರುತಿಸಲಾಗಿದೆ.
ರಾಜಣ್ಣ (35) ಕಡವಿಗೆರೆ, ಶಿರಾ ತಾಲೂಕು(ಚಾಲಕ) ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೊನ್ನವಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
+ There are no comments
Add yours