ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

1 min read

Tumkurnews
ತುಮಕೂರು; ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕೌಶಲ್ಯಾಭಿವೃದ್ಧಿ ತರಬೇತಿ ಆದಾಯಕ್ಕೆ 60 ದಿನಗಳ ತರಬೇತಿ ಶಿಬಿರ, ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ಕೌಶಲ್ಯಾಭಿವೃದ್ಧಿ ಯೋಜನೆಯಡಿ 3 ವರ್ಷಗಳ ಡಿಪ್ಲೋಮಾ ಇನ್ ಲೆದರ್ ಅಂಡ್ ಫ್ಯಾಷನ್ ಟೆಕ್ನಾಲಜಿ, ಸ್ವಯಂ ಉದ್ಯೋಗ, ಸಂಚಾರಿ ಮಾರಾಟ ಮಳಿಗೆ ಸ್ಥಾಪನೆ, ನೇರ ಸಾಲ ಯೋಜನೆ, ಚರ್ಮ ಶಿಲ್ಪಿ ಯೋಜನೆ, ಮಹಿಳಾ ಕುಶಲ ಕರ್ಮಿಗಳಿಗೆ ಕಾಯಕ ಸ್ಪೂರ್ತಿ ಪಾದುಕೆ ಕುಟೀರ ಯೋಜನೆ, ವಸತಿ ಯೋಜನೆಗಳಿಗೆ ಸೌಲಭ್ಯ ನೀಡಲಾಗುವುದು.
ಆಸಕ್ತರು https//suvidha.Karnataka.gov.in/m ಜಾಲತಾಣದ ಮೂಲಕ 2022ರ ಜುಲೈ 30ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9480886279, 9880276548, 9148024585, 9148024586ನ್ನು ಸಂಪರ್ಕಿಸಬಹುದೆಂದು ಚರ್ಮ ಕೈಗಾರಿಕಾ ಅಭಿವೃದ್ಧಿ ನಿಯಮಿತ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

You May Also Like

More From Author

+ There are no comments

Add yours