Tumkurnews
ಕೊರಟಗೆರೆ; ಹೊಟ್ಟೆ ನೋವು ತಾಳಲಾರದೆ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ತಾಲ್ಲೂಕಿನ ಬೊಡಬಂಡೇನಹಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದ್ದು, ಹೃತಿಕ್ ನಾಯಕ್ (19)ಆತ್ಮಹತ್ಯೆಗೆ ಶರಣಾದ ಯುವಕ. ಈತ ಮದ್ಯ ಸೇವನೆ ಚಟ ಹೊಂದಿದ್ದ ಎನ್ನಲಾಗಿದ್ದು, ವಿಪರೀತ ಮದ್ಯಸೇವನೆಯಿಂದ ಪದೇ ಪದೆ ಹೊಟ್ಟೆನೋವು ಕಾಣಿಸಿಕೊಳ್ಳುತ್ತಿತ್ತು ಎನ್ನಲಾಗಿದೆ. ಹೊಟ್ಟೆ ನೋವು ತಾಳಲಾರದೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




+ There are no comments
Add yours