Tumkurnews
ತುಮಕೂರು; ಸಾಲ ಸೌಲಭ್ಯ ಒದಗಿಸುವ ಮೂಲಕ ಗ್ರಾಮೀಣ ಭಾಗದ ಜನರ ಆರ್ಥಿಕ ಸದೃಢತೆಗೆ ಕೆನರಾ ಬ್ಯಾಂಕ್ ಸಹಕಾರಿಯಾಗಿದೆ ಎಂದು ತುಮಕೂರು ಕೆನರಾ ಬ್ಯಾಂಕ್ ಎಜಿಎಂ ರವಿ ತಿಳಿಸಿದರು.
ತಾಲ್ಲೂಕಿನ ಅರೆಯೂರು ಗ್ರಾಮದಲ್ಲಿ ಕೆನರಾ ಬ್ಯಾಂಕ್ ಅರೆಯೂರು ಶಾಖೆಯಿಂದ ಬುಧವಾರ ಆಯೋಜಿಸಿದ್ದ ಕೃಷಿ ಸಾಲ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರೈತರಿಗೆ ನೆರವಾಗುವಂತೆ ಕೆನರಾ ಬ್ಯಾಂಕ್ ನ ಅರ್ಧ ಶಾಖೆಗಳನ್ನು ಹಳ್ಳಿಗಳಲ್ಲಿ ಸ್ಥಾಪಿಸಲಾಗಿದೆ. ಹಾಗಾಗಿ ರೈತರು ಬ್ಯಾಂಕ್ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಲಾಭದಾಯಕ ಕೃಷಿ ಮಾಡಬಹುದಾಗಿದೆ ಎಂದರು.
ಉದ್ಯೋಗ ಮೇಳ; ಐಟಿಐ, ಡಿಪ್ಲೊಮಾ, ಬಿ.ಇ, PG ಪಾಸಾದವರಿಗೆ ನೇರ ಸಂದರ್ಶನ
ಬೆಳೆ ಸಾಲ, ಹೈನುಗಾರಿಕೆ ಸೇರಿದಂತೆ ಎಲ್ಲಾ ರೀತಿಯ ಸಾಲ ಸೌಲಭ್ಯ ಗಳು ನೀಡಲಾಗುತ್ತಿದೆ. ತುಮಕೂರು ಜಿಲ್ಲೆಯಲ್ಲಿ 27 ಶಾಖೆಗಳನ್ನು ಹಳ್ಳಿಯಲ್ಲಿ ಸ್ಥಾಪಿಸಲಾಗಿದೆ. ರೈತರಿಗೆ ನೆರವಾಗುವಂತೆ ಕೃಷಿ ಸಾಲ ವಿತರಿಸಲಾಗುತ್ತಿದೆ. ಪಡೆದ ಸಾಲವನ್ನು ಸಕಾಲಕ್ಕೆ ಮರುಪಾವತಿ ಮಾಡುವ ಮೂಲಕ ನಿಮ್ಮ ಬೆಳವಣಿಗೆಯ ಜೊತೆ ಬ್ಯಾಂಕ್ ಬೆಳವಣಿಗೆಗೂ ಸಹಕರಿಸಬೇಕು ಎಂದು ಮನವಿ ಮಾಡಿದರು.
ಗ್ರಾಹಕ ಸ್ನೇಹಿ ಬ್ಯಾಂಕ್ ಆಗಿ ಗುರುತಿಸಿಕೊಂಡಿರುವ ಕೆನರಾ ಬ್ಯಾಂಕ್ ದೇಶದಲ್ಲೇ ಮೂರನೇ ಸ್ಥಾನದಲ್ಲಿದೆ.1906ರಲ್ಲಿ ಆರಂಭವಾಗಿ ಪ್ರಸ್ತುತ ಗ್ರಾಹಕರ ವಿಶ್ವಾಸದಿಂದ ಮುನ್ನಡೆಯುತ್ತಿದೆ. ತುಮಕೂರು ಜಿಲ್ಲೆಯಲ್ಲಿ 6800 ಕೋಟಿ ರೂ. ವ್ಯವಹಾರ ಇದೆ, 3500 ಕೋಟಿ ರೂ. ಸಾಲ ನೀಡಲಾಗಿದೆ. ಕೆನರಾ ಬ್ಯಾಂಕ್ ಸಂಸ್ಥಾಪಕರು ಎತ್ತಿನ ಗಾಡಿಯಲ್ಲಿ ಹಳ್ಳಿಗಳಲ್ಲಿ ಮನೆ ಮನೆಗೆ ಹೋಗಿ ಬ್ಯಾಂಕ್ ಖಾತೆ ತೆರೆಸಿ ಬ್ಯಾಂಕ್ ಆರಂಭಿಸಿದ್ದರು ಎಂದು ಸ್ಮರಿಸಿದರು.
ಕೆಎಂಎಫ್ ನಿರ್ದೇಶಕ ರೇಣುಕಾ ಪ್ರಸಾದ್ ಮಾತನಾಡಿ, ಕೆನರಾ ಬ್ಯಾಂಕ್ ಗ್ರಾಮೀಣ ಭಾಗದ ಜನರ ಜೀವನಾಡಿಯಾಗಿದೆ. ಹತ್ತಿರದಲ್ಲೇ ಸೇವೆ ನೀಡುವ ಗ್ರಾಹಕರ ಅಚ್ಚು ಮೆಚ್ಚಿನ ಬ್ಯಾಂಕ್. ನಾವು ಪಡೆದ ಸಾಲವನ್ನು ಮರುಪಾವತಿ ಮಾಡಿದರೆ ಇನ್ನು ಹೆಚ್ಚಿನ ಜನರಿಗೆ ಸಾಲ ಸೌಲಭ್ಯ ದೊರೆಯುತ್ತದೆ. ಕೆನರಾ ಬ್ಯಾಂಕ್ ಕೃಷಿ ಸಾಲ ರೈತರ ಆರ್ಥಿಕ ಬಲವರ್ಧನೆಗೆ ನೆರವಾಗಿದೆ ಎಂದರು.
ಉಚಿತ ಕಂಪ್ಯೂಟರ್ ತರಬೇತಿಗೆ ಅರ್ಜಿ ಆಹ್ವಾನ
ಅರೆಯೂರು ಕೆನರಾ ಬ್ಯಾಂಕ್ ವ್ಯವಸ್ಥಾಪಕ ದೀಪಕ್ ಆರ್ ಮಾತನಾಡಿ, ಕೈಸಾಲ ಮಾಡುವುದನ್ನು ಬಿಟ್ಟು, ಬ್ಯಾಂಕ್ ನಲ್ಲಿ ಸಾಲ ಪಡೆದು ಸಕಾಲಕ್ಕೆ ಮರುಪಾವತಿ ಮಾಡಬೇಕು, ಸಾಲ ತೆಗೆದುಕೊಂಡು ಸರಿಯಾಗಿ ಕಟ್ಟಿ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು, ರೈತರಿಗೆ ಅನುಕೂಲವಾಗವಂತೆ ಕೃಷಿ ಸಾಲ ನೀಡಲಾಗುತ್ತಿದೆ ಎಂದು ತಿಳಿಸಿದರು.
ಸಾಲ ಪಡೆದು ಕಟ್ಟದೆ ಇರುವವರಿಗೂ ಮರುಪಾವತಿ ಮಾಡುವಂತೆ ಮಾಹಿತಿ ನೀಡಿದ ಅವರು, ಸಾಲ ಮರು ಪಾವತಿಯಿಂದ ಆಗುವ ಪ್ರಯೋಜನಗಳ ಕುರಿತು ವಿವರಿಸಿದರು.
ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷೆ ಸಿದ್ದಗಂಗಮ್ಮ, ಕಟ್ಟೆಗೊಲ್ಲಹಳ್ಳಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷೆ ಶ್ರೀರಂಗಮ್ಮ, ಗ್ರಾಪಂ ಸದಸ್ಯರಾದ ಪ್ರಭುದೇವ್, ಕೆ.ಎಂ ಕಿರಣ್, ಸಿದ್ದಲಿಂಗಮ್ಮ ಇನ್ನಿತರರು ಉಪಸ್ಥಿತರಿದ್ದರು.
+ There are no comments
Add yours