Tumkurnews
ತುಮಕೂರು; 18 ವರ್ಷ ಮೇಲ್ಪಟ್ಟ ಮೊದಲೆರಡು ಡೋಸ್ ಕೋವಿಡ್ ಲಸಿಕಾಕರಣ ಪೂರೈಸಿದವರಿಗೆ ಹತ್ತಿರದ ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಜುಲೈ 15 ರಿಂದ 75 ದಿನಗಳ ಕಾಲ ಬೂಸ್ಟರ್ ಡೋಸ್ ಹಾಕಲಾಗುವುದು ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ತಿಳಿಸಿದರು.
ಅವರು ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಸೋಮವಾರ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿದರು.
ಕೋವಿಡ್-19 ತಡೆಗಟ್ಟಲು ಲಸಿಕಾಕರಣ ಅಗತ್ಯವಾಗಿದ್ದು, ಗ್ರಾಮ ಪಂಚಾಯತ್ ಹಂತದಲ್ಲಿ ಪಿಡಿಓ ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ವೃದ್ಧಾಪ್ಯ ವೇತನ ಪಡೆಯತ್ತಿರುವವರ ಮಾಹಿತಿ ತರಿಸಿಕೊಂಡು ಅವರಿಗೆ ಬೂಸ್ಟರ್ ಡೋಸ್ ಲಸಿಕೆಯನ್ನು ಹಾಕಿಸಿಕೊಳ್ಳಲು ತಿಳಿಸಬೇಕು. ಈ ಕುರಿತು ತಹಶೀಲ್ದಾರರು ಮತ್ತು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಕಾಧಿಕಾರಿಗಳು ತಮ್ಮ ಅಧೀನ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಸೂಚಿಸಿದರು.
ಆಗಸ್ಟ್ 11ರಿಂದ 17ರವರೆಗೆ ದೇಶದ ಪ್ರತಿ ಮನೆಯಲ್ಲೂ ರಾಷ್ಟ್ರದ್ವಜಾರೋಹಣಕ್ಕೆ ಕೇಂದ್ರ ಕರೆ; ಜಿಲ್ಲೆಯಲ್ಲಿ ಸಿದ್ಧತೆ ಆರಂಭ
ನಿಗಧಿತ ವಯಸ್ಸಿನ ಮೇಲ್ಪಟ್ಟ ಎಲ್ಲರೂ ಲಸಿಕೆಯನ್ನು ಹಾಕಿಸಿಕೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಕ್ರಮವಹಿಸಬೇಕು, ಶಿಕ್ಷಣಾಧಿಕಾರಿಗಳು ತಮ್ಮ ತಾಲ್ಲೂಕು ವ್ಯಾಪ್ತಿಯ ಪಿಯುಸಿ, ಐಟಿಐ, ಡಿಪ್ಲೊಮಾ, ನರ್ಸಿಂಗ್ ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಂದ ಲಸಿಕಾಕರಣವಾಗಿರುವ ಬಗ್ಗೆ ಪ್ರಮಾಣಪತ್ರಗಳನ್ನು ಪಡೆಯಬೇಕು, ಲಸಿಕೆಯನ್ನು ಪಡೆಯದಿರುವ ಮಕ್ಕಳಿಗೆ ಕೂಡಲೇ ಲಸಿಕೆ ಹಾಕಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ನಿರ್ದೇಶಿಸಿದರು.
10ನೇ ತರಗತಿ ನಂತರ ಕಾಲೇಜು ದಾಖಲಾಗದ ಮಕ್ಕಳ ಮಾಹಿತಿಯನ್ನು ತರಿಸಿಕೊಂಡು ಅವರಿಗೂ ಲಸಿಕೆಯನ್ನು ಹಾಕಿಸಲು ಕ್ರಮಕೈಗೊಳ್ಳಬೇಕೆಂದು ಸೂಚಿಸಿದರು.
ಭೂಮಿ ಯೋಜನೆ ಪ್ರಗತಿ, ಪಹಣಿ ಕಾಲಂ 3/9 ಮಿಸ್ ಮ್ಯಾಚ್, ಪೈಕಿ ಪಹಣಿ ಒಟ್ಟುಗೂಡಿಸುವಿಕೆ, 11ಇಗೆ ಸಂಬಂಧಿಸಿದ ಆರ್ಟಿಸಿ ತಿದ್ದುಪಡಿ ಪ್ರಕರಣಗಳ ಪ್ರಗತಿ ಪರಿಶೀಲಿಸಲಾಯಿತು.
ಉದ್ಯೋಗಿನಿ ಯೋಜನೆ; 3 ಲಕ್ಷ ರೂ. ಸಾಲ, 1.50 ಲಕ್ಷ ರೂ. ಸಬ್ಸಿಡಿ! ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ
ಸಾಮಾಜಿಕ ಕುಂದು- ಕೊರತೆಯಡಿ ದಾಖಲಾಗಿರುವ ಪ್ರಕರಣಗಳ ಇತ್ಯರ್ಥ ಮತ್ತು ಸಾಮಾಜಿಕ ಭದ್ರತಾ ಯೋಜನೆಗಳಡಿ ಬಾಕಿ ಇರುವ ಆಧಾರ್ ಸೀಡಿಂಗ್ ಪ್ರಕರಣಗಳನ್ನು ಶೀಘ್ರ ವಿಲೇವಾರಿಗೊಳಿಸುವಂತೆ ಅವರು ಸೂಚಿಸಿದರು. ಸಭೆಯಲ್ಲಿ ಜಿಪಂ ಸಿಇಒ ಡಾ. ಕೆ.ವಿದ್ಯಾಕುಮಾರಿ, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಉಪವಿಭಾಗಾಧಿಕಾರಿ ವಿ. ಅಜಯ್, ತಹಸೀಲ್ದಾರ್ ಮೋಹನ್ ಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಟಿ.ಎ ವೀರಭದ್ರಯ್ಯ, ಜಿಲ್ಲಾ ಪಂಚಾಯತ್ ಅಭಿವೃದ್ಧಿ ಉಪಕಾರ್ಯದರ್ಶಿ ಅಥಿಕ್, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಕೇಶವರಾಜ್ ಸೇರಿದಂತೆ ಇನ್ನಿತರ ಅಧಿಕಾರಿ ವರ್ಗದವರು ಹಾಜರಿದ್ದರು.
+ There are no comments
Add yours