ತಿಪಟೂರು; ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ

1 min read

 

Tumkurnews
ತುಮಕೂರು; ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಜಿಲ್ಲೆಯ ತಿಪಟೂರು ತಾಲ್ಲೂಕಿನ ಗೌಡನಕಟ್ಟೆ, ಹೊನ್ನೇನಹಳ್ಳಿ, ಬಿದರೆಗುಡಿ ಗ್ರಾಮಗಳಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಗೌಡನಕಟ್ಟೆ ಗ್ರಾಮದಲ್ಲಿ 303, ಹೊನ್ನೇನಹಳ್ಳಿ ಗ್ರಾಮದಲ್ಲಿ 509, ಬಿದರೆಗುಡಿ ಗ್ರಾಮದಲ್ಲಿ 398 ಪಡಿತರ ಚೀಟಿ ಹೊಂದಿರುವ ಕುಟುಂಬಗಳಿದ್ದು, ನ್ಯಾಯಬೆಲೆ ಅಂಗಡಿ ಮಂಜೂರಾತಿ ಪಡೆಯಲು ಇಚ್ಛಿಸುವ ಅರ್ಜಿದಾರರು ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ (ನಿಯಂತ್ರಣ) ಆದೇಶ 2016 ಮತ್ತು ತಿದ್ದುಪಡಿ ಆದೇಶಗಳನ್ವಯ ನಿಗದಿತ ಆದ್ಯತೆಗಳನ್ನು ಹೊಂದಿರುವುದು ಕಡ್ಡಾಯವಾಗಿರುತ್ತದೆ.

ಮಹಿಳಾ ಅಭಿವೃದ್ಧಿ ನಿಗಮದಿಂದ ಬಡ್ಡಿ ರಹಿತ ಸಾಲ; ಅರ್ಜಿ ಆಹ್ವಾನ
ರಾಜ್ಯ ಸರ್ಕಾರಿ ಸ್ವಾಮ್ಯದ ನಿಗಮ, ಸಂಸ್ಥೆ, ಗ್ರಾಮ ಪಂಚಾಯತಿ ಮತ್ತು ಸ್ಥಳೀಯ ಸಂಸ್ಥೆ; ಸಹಕಾರ ಸಂಘಗಳಾದ ತಾಲೂಕು ವ್ಯವಸಾಯೋತ್ಪನ್ನ ಸಹಕಾರ ಸಂಘ, ವ್ಯವಸಾಯ ಸೇವಾ ಸಹಕಾರ ಸಂಘ(ನಿ), ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಥವಾ ವಿ.ಎಸ್.ಎಸ್.ಎಂ.ಎಸ್, ತೋಟಗಾರಿಕೆ ಉತ್ಪನ್ನಗಳ ಸಹಕಾರ ಸಂಘದ ಮಾರಾಟ ಮಂಡಳಿ ನಿಯಮಿತ, ನೋಂದಾಯಿತ ಸಹಕಾರ ಸಂಘ, ನೋಂದಾಯಿತ ಪ್ರಾಥಮಿಕ ಬಳಕೆದಾರರ ಸಹಕಾರ ಸಂಘ, ದೊಡ್ಡ ಪ್ರಮಾಣದ ಆದಿವಾಸಿಗಳ ವಿವಿಧೋದ್ದೇಶ ಸಹಕಾರ ಸಂಘ, ನೋಂದಾಯಿತ ನೇಕಾರರ ಸಹಕಾರ ಸಂಘ, ನೋಂದಾಯಿತ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘ, ನೋಂದಾಯಿತ ವಿವಿಧೋದ್ದೇಶ ಸಹಕಾರ ಸಂಘ, ಅಂಗವಿಕಲರ ಕಲ್ಯಾಣ ಸಹಕಾರ ಸಂಘ ಹಾಗೂ ಬ್ಯಾಂಕಿನಿಂದ ನಡೆಸಲ್ಪಡುವ ಸಹಕಾರ ಸಂಘ ಅಥವಾ ಸಹಕಾರ ಬ್ಯಾಂಕ್; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನೋಂದಾಯಿಸಲ್ಪಟ್ಟಿರುವ ಸ್ತ್ರೀ-ಶಕ್ತಿ ಗುಂಪು ಮತ್ತು ಮಹಿಳಾ ಸ್ವ-ಸಹಾಯ ಗುಂಪುಗಳು; ವಿಕಲಚೇತನರು ಹಾಗೂ ತೃತೀಯ ಲಿಂಗಿಗಳು ನ್ಯಾಯಬೆಲೆ ಅಂಗಡಿ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಭರ್ತಿ ಮಾಡಿದ ನಿಗದಿತ ಅರ್ಜಿ ನಮೂನೆ ‘ಎ’ಯೊಂದಿಗೆ ಸಹಕಾರ ಸಂಘ, ಸಂಸ್ಥೆ ಅಥವಾ ಸ್ವ-ಸಹಾಯ ಸಂಘಗಳಾದಲ್ಲಿ ನೋಂದಾವಣಿ ಪತ್ರ, ಸಹಕಾರ ಸಂಘ, ಸಂಸ್ಥೆಗಳಾದಲ್ಲಿ ಕಳೆದ 3 ವರ್ಷಗಳ ದೃಢೀಕೃತ ಲೆಕ್ಕ ಪರಿಶೋಧನಾ ವರದಿ, ಸಹಕಾರ ಸಂಘ, ಸಂಸ್ಥೆಗಳ ಉಪ ನಿಯಮಗಳು(ಬೈಲಾ), ಸಹಕಾರ ಸಂಘ, ಸಂಸ್ಥೆಗಳ ಪರವಾಗಿ ನ್ಯಾಯಬೆಲೆ ಅಂಗಡಿ ನಡೆಸಲು ಮತ್ತು ಪ್ರಮಾಣ ಪತ್ರ ಸಲ್ಲಿಸಲು ಅಧಿಕಾರ ಪಡೆದಿರುವ ಪ್ರತಿನಿಧಿಯನ್ನು ನೇಮಿಸಿರುವ ಬಗ್ಗೆ ನಿರ್ಣಯ, ನೇಮಕಾತಿ ಪತ್ರ, ಸಹಕಾರ ಸಂಘದ ವಿರುದ್ಧ ಕರ್ನಾಟಕ ಸೊಸೈಟೀಸ್ ರಿಜಿಸ್ಟ್ರೇಷನ್ ಆಕ್ಟ್ 1959ರಡಿ ವಿಚಾರಣೆ ಹಾಗೂ ಟ್ರಯಲ್ ಮತ್ತು ಲಿಕ್ವಿಡೇಷನ್ ನಡವಳಿ ನಡೆದಿರುವುದಿಲ್ಲ ಎಂಬ ಬಗ್ಗೆ ಸಕ್ಷಮ ಪ್ರಾಧಿಕಾರಿಯು ನೀಡಿರುವ ದೃಢೀಕರಣ ಪತ್ರ, ವ್ಯಾಪಾರ ಮಳಿಗೆಯ ಖಾತೆ ಅಥವಾ ಬಾಡಿಗೆ, ಕರಾರು ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಸಹಕಾರ ಸಂಘದವರು ಅಧಿಕೃತವಾಗಿ ನೇಮಿಸಿರುವ ಪ್ರತಿನಿಧಿಯ ಇತ್ತೀಚಿನ 3 ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ, ಸಹಕಾರ ಸಂಘಗಳು, ಸ್ತ್ರೀ-ಶಕ್ತಿ ಗುಂಪುಗಳು ಮತ್ತು ಮಹಿಳಾ ಸ್ವಸಹಾಯ ಗುಂಪುಗಳು ಕನಿಷ್ಟ 3 ವರ್ಷದ ಹಿಂದೆ ನೋಂದಾವಣಿಯಾಗಿರಬೇಕು ಹಾಗೂ 3 ವರ್ಷಗಳ ನಿರಂತರ ಚಟುವಟಿಕೆಯಲ್ಲಿದ್ದು, 1 ವರ್ಷಗಳಿಂದ ಕನಿಷ್ಟ 1 ಲಕ್ಷ ರೂ. ಮೊತ್ತದ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರಬೇಕು.

ಉದ್ಯೋಗಿನಿ ಯೋಜನೆ; 3 ಲಕ್ಷ ರೂ. ಸಾಲ, 1.50 ಲಕ್ಷ ರೂ. ಸಬ್ಸಿಡಿ! ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

ಸಹಕಾರ ಸಂಘ, ಸ್ತ್ರೀ-ಶಕ್ತಿ ಗುಂಪು, ಮಹಿಳಾ ಸ್ವ-ಸಹಾಯ ಗುಂಪುಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕಾರ್ಯದರ್ಶಿ ಹಾಗೂ ವಿಕಲಚೇತನರು, ತೃತೀಯ ಲಿಂಗಿಗಳ ವಿದ್ಯಾರ್ಹತೆಯ (ಕನಿಷ್ಟ ಎಸ್.ಎಸ್.ಎಲ್.ಸಿ ಉತ್ತೀರ್ಣ) ಬಗ್ಗೆ ಅಂಕಪಟ್ಟಿ ಮತ್ತು ಆಧಾರ್ ಕಾರ್ಡ್ ಪತ್ರಿಯನ್ನು ಸಲ್ಲಿಸಬೇಕು.

ತುಮಕೂರು- ಜೋಗ ಜಲಪಾತ; KSRTC ವಿಶೇಷ ಟೂರ್ ಪ್ಯಾಕೇಜ್ ಘೋಷಣೆ
ಮೇಲ್ಕಾಣಿಸಿದ ಅಂಶಗಳ ಷರತ್ತಿಗೆ ಒಳಪಟ್ಟು ಆಯಾ ಪ್ರದೇಶ ವ್ಯಾಪ್ತಿಯ ಸಂಘ ಸಂಸ್ಥೆಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿದ್ದು, ಖಾಸಗಿ ವ್ಯಕ್ತಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ನಿಗದಿತ ಅರ್ಜಿ ನಮೂನೆ-‘ಎ’ಯನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಅಥವಾ ತಿಪಟೂರು ತಾಲೂಕು ಕಚೇರಿಯ ಆಹಾರ ಶಾಖೆಯಲ್ಲಿ ಪಡೆಯಬಹುದಾಗಿದೆ.
ಭರ್ತಿ ಮಾಡಿದ ಅರ್ಜಿಯನ್ನು ಈ ಪ್ರಕಟಣೆ ಹೊರಡಿಸಿದ 30 ದಿನಗಳೊಳಗಾಗಿ ಜಂಟಿ ನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ನಂ-205, ಮಿನಿ ವಿಧಾನಸೌಧ ಇವರ ಕಚೇರಿಗೆ ಸಲ್ಲಿಸಬೇಕು. ನಿಗದಿತ ಅವಧಿಯ ನಂತರ ಸಲ್ಲಿಕೆಯಾಗುವ ಅಥವಾ ಬೇರೆ ಕಚೇರಿಯಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಒಂದಕ್ಕಿಂತ ಹೆಚ್ಚು ಅರ್ಜಿಗಳು ಸ್ವೀಕೃತವಾದಲ್ಲಿ ಅರ್ಹರಿಗೆ ನ್ಯಾಯಬೆಲೆ ಅಂಗಡಿ ಪ್ರಾಧಿಕಾರ ಮಂಜೂರು ಮಾಡುವ ಅಧಿಕಾರವು ಜಂಟಿ ನಿರ್ದೇಶಕರ ಅಂತಿಮ ತೀರ್ಮಾನಕ್ಕೆ ಒಳಪಟ್ಟಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ತುಮಕೂರು; ಜಿಲ್ಲಾ ನಗರಾಭಿವೃದ್ಧಿ ಕೋಶದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

About The Author

You May Also Like

More From Author

+ There are no comments

Add yours