ಕೆ-ಶಿಪ್ ಎಡವಟ್ಟು- ಸುಟ್ಟು ಕರಕಲಾದ ಲಾರಿ; ವಿಡಿಯೋ

1 min read

Tumkurnews
ತುಮಕೂರು; ತಾಲ್ಲೂಕಿನ ಗೂಳೂರು ಗ್ರಾಮದಲ್ಲಿ ಮದ್ದೂರಿನಿಂದ ಬರುತ್ತಿದ್ದ ಎಳನೀರು ಹೊತ್ತ ಲಾರಿಯೊಂದು ಅಗ್ನಿಗಾಹುತಿಯಾಗಿರುವ ಘಟನೆ ಮಂಗಳವಾರ ನಡೆದಿದೆ.

ನಿಧಿ ಕದಿಯಲು ಬಂದವರನ್ನು ಜೈಲಿಗಟ್ಟಿದ ಆಂಜನೇಯ!; ಮಾರುತಿ ಮಹಿಮೆ ಎಂದ ಭಕ್ತರು
ಬೆಳಗ್ಗಿನ ಜಾವ 4 ಗಂಟೆ ಸಮಯದಲ್ಲಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಲಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ನೋಡನೋಡುತ್ತಿದ್ದಂತೆ ಧಗಧಗಿಸಿ ಉರಿದಿದೆ. ‌ಅಗ್ನಿಶಾಮಕ ದಳದವರು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಬೆಳಗ್ಗೆ 6 ಗಂಟೆಗೆ ಮತ್ತೊಮ್ಮೆ ಲಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.

ಕಳ್ಳರ ಪಾಲಿನ ಸ್ವರ್ಗ; ತುಮಕೂರು KSRTC ಬಸ್ ನಿಲ್ದಾಣ!
ಅವೈಜ್ಞಾನಿಕ ವಿಭಜಕ; ಅವೈಜ್ಞಾನಿಕ ರಸ್ತೆ ವಿಭಜಕದಿಂದಾಗಿ ಇಲ್ಲಿ ತಿಂಗಳಿಗೆ ಮೂರ್ನಾಲ್ಕು ಅಪಘಾತಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕೆ-ಶಿಪ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತುಮಕೂರು; ಜಿಲ್ಲಾ ನಗರಾಭಿವೃದ್ಧಿ ಕೋಶದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

About The Author

You May Also Like

More From Author

+ There are no comments

Add yours