Tumkurnews
ತುಮಕೂರು; ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಕೇಂದ್ರ ಸರ್ಕಾರವು 2022ನೇ ಸಾಲಿನಲ್ಲಿ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆಗೈದ ವ್ಯಕ್ತಿ, ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ.
ಒಕ್ಕಲಿಗ ಅಭಿವೃದ್ಧಿ ನಿಗಮದಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸಲಿಚ್ಛಿಸುವವರು ವೆಬ್ಸೈಟ್: www.disablityaffairs.gov.in ಮೂಲಕ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ದ್ವಿ-ಪ್ರತಿಯಲ್ಲಿ ಆಗಸ್ಟ್ 22ರೊಳಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾ ಬಾಲ ಭವನ ಆವರಣ, ಎಂ.ಜಿ ರಸ್ತೆ ತುಮಕೂರು ಇಲ್ಲಿಗೆ ಸಲ್ಲಿಸಬೇಕೆಂದು ಜಿಲ್ಲಾ ವಿಕಲ ಚೇತನರ ಹಾಗೂ ಹಿರಿಯ ನಾಗರೀಕರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
+ There are no comments
Add yours