ಹೆಂಡತಿ ಮನೆಗೆ ಹೋದ ಮಗ ನಾಪತ್ತೆ; ತಂದೆಯಿಂದ ದೂರು ದಾಖಲು

1 min read

Tumkurnews
ಗುಬ್ಬಿ; ಪೊಲೀಸ್ ಠಾಣೆ ವ್ಯಾಪ್ತಿಯ ಸುಮಾರು 39 ವರ್ಷದ ರಂಗನಾಥ ಎಂಬ ವ್ಯಕ್ತಿಯು ಜುಲೈ 23ರ ರಾತ್ರಿ 10 ಗಂಟೆಯಿಂದ ಕಾಣೆಯಾಗಿದ್ದಾನೆ ಎಂದು ಈತನ ತಂದೆ ಠಾಣೆಗೆ ದೂರು ನೀಡಿದ್ದಾರೆ.

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿ; ಅರ್ಜಿ ಆಹ್ವಾನ
ಕಾಣೆಯಾದ ಈ ವ್ಯಕ್ತಿಯು ತನ್ನ ಹೆಂಡತಿ ಕಾವ್ಯಳೊಂದಿಗೆ ಜಗಳವಾಡಿಕೊಂಡಿದ್ದು, ಈತನ ಹೆಂಡತಿ ತನ್ನ ಮಗುವನ್ನು ಕರೆದುಕೊಂಡು ತವರು ಮನೆಯಲ್ಲಿರುವುದರಿಂದ ಮಗುವನ್ನು ನೋಡಿಕೊಂಡು ಬರುತ್ತೇನೆಂದು ಹೋದವನು ಮರಳಿ ಬಾರದೆ ಕಾಣೆಯಾಗಿದ್ದಾನೆ ಎಂದು ದೂರಿನಲ್ಲಿ ದಾಖಲಾಗಿದೆ.

ಮಹಿಳಾ ಅಭಿವೃದ್ಧಿ ನಿಗಮದಿಂದ ಬಡ್ಡಿ ರಹಿತ ಸಾಲ; ಅರ್ಜಿ ಆಹ್ವಾನ
ಈತನು 5.5 ಅಡಿ ಎತ್ತರ, ಕೋಲುಮುಖ, ಎಣ್ಣೆಗೆಂಪು ಮೈಬಣ್ಣ ಹೊಂದಿದ್ದು, ಕನ್ನಡ ಮಾತನಾಡುತ್ತಾನೆ. ಮನೆಯಿಂದ ಹೋಗುವಾಗ ಕಪ್ಪು ಬಣ್ಣದ ಪ್ಯಾಂಟ್ ಹಾಗೂ ಬಿಳಿ ಬಣ್ಣದ ಷರ್ಟ್ ಧರಿಸಿದ್ದನು.
ಈತನ ಬಗ್ಗೆ ಸುಳಿವು ಸಿಕ್ಕವರು ದೂ.ವಾ.ಸಂ. 0816-2272451, 08131-22229, 222210, ಮೊ.ಸಂ. 9480802959ನ್ನು ಸಂಪರ್ಕಿಸಬೇಕೆಂದು ಪೊಲೀಸ್ ಸಬ್‍ಇನ್ಸ್ ಪೆಕ್ಟರ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ಉದ್ಯೋಗಿನಿ ಯೋಜನೆ; 3 ಲಕ್ಷ ರೂ. ಸಾಲ, 1.50 ಲಕ್ಷ ರೂ. ಸಬ್ಸಿಡಿ! ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

About The Author

You May Also Like

More From Author

+ There are no comments

Add yours