Tumkurnews
ತುಮಕೂರು; ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಪರಿಶಿಷ್ಟ ಜಾತಿಯ ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಅರ್ಜಿ ಆಹ್ವಾನಿಸಲಾಗಿದೆ.
ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿ; ಅರ್ಜಿ ಆಹ್ವಾನ
ಖುಷ್ಕಿ, ಒಣ ಜಮೀನಿನಲ್ಲಿ ಕೊಳವೆ ಬಾವಿ ಕೊರೆಸಿ ನೀರಾವರಿ ಸೌಲಭ್ಯ ಕಲ್ಪಿಸುವ ‘ಗಂಗಾ ಕಲ್ಯಾಣ’ ಯೋಜನೆ, ನಿರುದ್ಯೋಗಿ ಅಭ್ಯರ್ಥಿಗಳಿಗೆ ಸ್ವಯಂ ಉದ್ಯೋಗ ನೇರಸಾಲ ಯೋಜನೆ ಮತ್ತು ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಮಹಿಳೆಯರಿಗೆ ಗುಂಪು ಚಟುವಟಿಕೆಗಳಿಗೆ ಉತ್ತೇಜನ ನೀಡಲು ನೋಂದಾಯಿತ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ, ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಭೂ ಒಡೆತನ ಯೋಜನೆಗಳಿಗೆ ಸಂಬಂಧಿಸಿದಂತೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 20, 2022 ಕೊನೆಯ ದಿನಾಂಕವಾಗಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಮಹಿಳಾ ಅಭಿವೃದ್ಧಿ ನಿಗಮದಿಂದ ಬಡ್ಡಿ ರಹಿತ ಸಾಲ; ಅರ್ಜಿ ಆಹ್ವಾನ
+ There are no comments
Add yours