Tumkurnews
ತುಮಕೂರು; ತುಮಕೂರು ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನಲ್ಲಿ ಪ್ರಸ್ತುತ 2022-23ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಬಿ.ಎಸ್ಸಿ., ಬಿಸಿಎ ಮತ್ತು ಬಿ.ವೋಕ್ ಕೋರ್ಸ್ ಗಳ ಉಳಿಕೆ, ಖಾಲಿ ಇರುವ ಸೀಟುಗಳ ಪ್ರವೇಶಾತಿಗೆ ಹೊಸ ಮೆರಿಟ್ ಮತ್ತು ರೋಸ್ಟರ್ ಆಧಾರದ ಮೇಲೆ ಆಗಸ್ಟ್ 3ರಂದು ಎರಡನೇ ಸುತ್ತಿನ ಕೌನ್ಸಿಲಿಂಗ್ ಮೂಲಕ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತುಮಕೂರು ವಿವಿ ನೂತನ ಕುಲಪತಿಗಳಾಗಿ ಪ್ರೊ.ವೆಂಕಟೇಶ್ವರಲು ಅಧಿಕಾರ ಸ್ವೀಕಾರ
ಪ್ರವೇಶಾತಿಗೆ ಅರ್ಜಿ ಸಲ್ಲಿಸಿ ಜುಲೈ 14ರಂದು ನಡೆದ ಮೊದಲನೇ ಸುತ್ತಿನ ಕೌನ್ಸಿಲಿಂಗ್ ಪ್ರಕ್ರಿಯೆಯಲ್ಲಿ ಹಾಜರಾಗದ ಮತ್ತು ಸೀಟು ಸಿಗದೆ ಇರುವ ವಿದ್ಯಾರ್ಥಿಗಳು ಹಾಗೂ ಜುಲೈ 30ರೊಳಗೆ ಅರ್ಜಿ ಸಲ್ಲಿಸಿ ದಾಖಲಾತಿಗಳ ಪರಿಶೀಲನೆ ಆಗಿರುವ ಮತ್ತು ದಾಖಲಾತಿಗಳ ಪರಿಶೀಲನೆ ಆಗದಿರುವ ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಆಗಸ್ಟ್ 3 ರಂದು ಬೆಳಗ್ಗೆ 10.30 ಗಂಟೆಗೆ ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನ ಆವರಣದಲ್ಲಿ ನಡೆಯುವ ಎರಡನೇ ಸುತ್ತಿನ ಕೌನ್ಸಿಲಿಂಗ್‍ಗೆ ಹಾಜರಾಗಲು ಅವರು ಸೂಚಿಸಿದ್ದಾರೆ.
ತುಮಕೂರು; ಜಿಲ್ಲಾ ನಗರಾಭಿವೃದ್ಧಿ ಕೋಶದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
+ There are no comments
Add yours