Tumkurnews
ತುಮಕೂರು; ಮುಖ್ಯಮಂತ್ರಿ ನಿವೇಶನ ಯೋಜನೆಯಡಿ ನಿವೇಶನ ರಹಿತ ಅರ್ಹ ಫಲಾನುಭವಿಗಳನ್ನು ಗುರುತಿಸಿ ನಿವೇಶನ ಹಂಚಿಕೆ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಒ ಡಾ.ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚಿಸಿದರು.
ಮತದಾರರ ಪಟ್ಟಿಯಲ್ಲಿ ಹೆಸರಿದೆಯೇ?; ಚುನಾವಣಾ ಆಯೋಗದಿಂದ ಮಹತ್ವದ ಸೂಚನೆ
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಮುಖ್ಯಮಂತ್ರಿ ಗ್ರಾಮೀಣ ನಿವೇಶನ ಯೋಜನೆಗಳಡಿ ಮಂಜೂರಾಗಿರುವ ಜಮೀನಿನಲ್ಲಿ ಅಭಿವೃದ್ಧಿಪಡಿಸಿದ ನಿವೇಶನಗಳ ಮತ್ತು ಹಕ್ಕುಪತ್ರ ವಿತರಿಸಿರುವ ಮತ್ತು ವಿತರಿಸಲು, ಬಾಕಿಯಿರುವ ಪ್ರಸ್ತಾವನೆಗಳ ಕುರಿತಂತೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣಾಭಿವೃದ್ಧಿ ಇಂಜಿನಿಯರ್‌ಗಳು, ಭೂದಾಖಲೆಗಳ ಸಹಾಯಕ ನಿರ್ದೇಶಕರುಗಳು, ಗ್ರಾಮಪಂಚಾಯತಿಗಳ ಪಿಡಿಓಗಳ ಜೊತೆ ಸಭೆ ನಡೆಸಿ ಅವರು ಮಾತನಾಡಿದರು.
ತುಮಕೂರು; ಜಿಲ್ಲಾ ನಗರಾಭಿವೃದ್ಧಿ ಕೋಶದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮುಖ್ಯಮಂತ್ರಿ ಗ್ರಾಮೀಣ ನಿವೇಶನ ಯೋಜನೆಗಾಗಿ ಜಿಲ್ಲಾಧಿಕಾರಿಗಳು, ಜಿಲ್ಲೆಗೆ 700 ಎಕರೆ ಜಮೀನನ್ನು ಮಂಜೂರು ಮಾಡಿರುತ್ತಾರೆ. ಈ ಜಮೀನು ತಹಶೀಲ್ದಾರ್ ಗಳಿಂದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಹಸ್ತಾಂತರವಾಗಬೇಕು. ಎಡಿಎಲ್‍ಆರ್ ಅವರಿಂದ ಸರ್ವೇ ಸ್ಕೆಚ್ ಆಗಬೇಕು. ಸ್ಕೆಚ್ ಆಗಿರುವ ಜಮೀನನ್ನು ಎಇಇ, ಪಿಆರ್‍ಡಿಯಿಂದ ಅಭಿವೃದ್ಧಿ ಪಡಿಸಬೇಕು. ಗ್ರಾಮ ಪಂಚಾಯಿತಿಗಳು ನಡೆಸುವ ಗ್ರಾಮ ಸಭೆಯಲ್ಲಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಬೇಕಲ್ಲದೇ, ನಿವೇಶನ ಪ್ರಸ್ತಾವನೆಯನ್ನು ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಸಲ್ಲಿಸಬೇಕು. ನಿಗಮದ ಅನುಮೋದನೆ ಸಿಕ್ಕಿದ ಮೇಲೆ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಬೇಕು ಎಂದರು.
ಕಳ್ಳರ ಪಾಲಿನ ಸ್ವರ್ಗ; ತುಮಕೂರು KSRTC ಬಸ್ ನಿಲ್ದಾಣ!
ವಿವಿಧ ಅಧಿಕಾರಿಗಳ ಹಂತದಲ್ಲಿರುವ ಕೆಲಸಗಳನ್ನು ಪೂರ್ಣಗೊಳಿಸಬೇಕು. ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ನಿವೇಶನ ರಚಿಸಲಾಗದ ಜಾಗವಾಗಿದ್ದಲ್ಲಿ ತಹಶೀಲ್ದಾರ್ ಅವರಿಗೆ ಪತ್ರ ಬರೆದು ತಿಳಿಸಬೇಕೆಂದರು.
ಅರ್ಹ ಫಲಾನುಭವಿಗಳನ್ನು ಗ್ರಾಮ ಸಭೆಯಲ್ಲಿ ಆಯ್ಕೆ ಮಾಡಬೇಕು. ಫಲಾನುಭವಿ ಗ್ರಾಮದಲ್ಲಿಯೇ ವಾಸವಿರಬೇಕು ಬೇರೆ ನಿವೇಶನ, ಮನೆಯನ್ನು ಹೊಂದಿರದ ಅರ್ಹರನ್ನು ಗುರುತಿಸಿ ನಿವೇಶನ ಹಂಚಿಕೆ ಮಾಡಬೇಕು ಎಂದು ತಿಳಿಸಿದರು.
ಉದ್ಯೋಗಿನಿ ಯೋಜನೆ; 3 ಲಕ್ಷ ರೂ. ಸಾಲ, 1.50 ಲಕ್ಷ ರೂ. ಸಬ್ಸಿಡಿ! ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ
ಜಿಪಂ ಯೋಜನಾ ನಿರ್ದೇಶಕ ನರಸಿಂಹಮೂರ್ತಿ ಹಾಜರಿದ್ದರು.
+ There are no comments
Add yours