Tumkurnews
ತುಮಕೂರು; ಜಿಲ್ಲಾಧಿಕಾರಿ ಜಿಲ್ಲಾ ನಗರಾಭಿವೃದ್ಧಿ ಕೋಶದಿಂದ ವಿವಿಧ ಹುದ್ದೆಗಳಿಗೆ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಪುರಸಭೆಗಳಲ್ಲಿ ಖಾಲಿ ಇರುವ ಒಟ್ಟು 11 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಜಿಲ್ಲೆಯ ತಾಲ್ಲೂಕುಗಳಲ್ಲಿ ಖಾಲಿ ಇರುವ 6 ಲೋಡರ್ ಮತ್ತು
1 ಕ್ಲೀನರ್ ಹುದ್ದೆಗಳಲ್ಲಿ ಕೆಲಸ ಮಾಡಲು ಸಿದ್ಧವಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ; ಅಭ್ಯರ್ಥಿಗಳು ಕನ್ನಡ ಮಾತನಾಡಲು ತಿಳಿದಿರಬೇಕು. ವಿದ್ಯಾರ್ಹತೆ ಅನ್ವಯಿಸುವುದಿಲ್ಲ.
ವಯೋಮಿತಿ ಸಡಿಲಿಕೆ;
ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 55 ವರ್ಷಗಳನ್ನು ಹೊಂದಿರಬೇಕು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30.07.2022
ವೆಬ್‍ಸೈಟ್ tumkur.nic.in ಮೂಲಕ ಸಲ್ಲಿಸಬಹುದು.
+ There are no comments
Add yours