Tumkurnews
ತುಮಕೂರು; ರಾಜ್ಯದಲ್ಲಿ ನಿರಂತರವಾಗಿ ಹಿಂದೂ ಕಾರ್ಯಕರ್ತರ ಹತ್ಯೆಗೆ ಕಾರಣವಾಗಿರುವ ಸಂಘಟನೆಗಳಾದ ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಗಳನ್ನು ರಾಜ್ಯದಲ್ಲಿ ನಿಷೇಧ ಮಾಡಬೇಕು ಎಂದು ಋಷಿಕುಮಾರ ಸ್ವಾಮೀಜಿ ಒತ್ತಾಯಿಸಿದರು.
ಪ್ರವೀಣ್ ಹಂತಕರನ್ನು ಎನ್ ಕೌಂಟರ್ ಮಾಡಿ; ಸರ್ಕಾರಕ್ಕೆ ಗಡುವು ನೀಡಿದ ಋಷಿಕುಮಾರ ಸ್ವಾಮೀಜಿ
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಘಟನೆಗಳನ್ನು ನಿಷೇಧ ಮಾಡದಿದ್ದಲ್ಲಿ ಇದೇ ರೀತಿಯ ಹೀನ ಕೃತ್ಯಗಳು ರಾಜ್ಯದಲ್ಲಿ ನಡೆಯುತ್ತಲೇ ಇರುತ್ತವೆ. ಸರ್ಕಾರ ಕೂಡಲೇ ಎಚ್ಚೆತ್ತುಕೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ನಮ್ಮ ರಕ್ಷಣೆಯನ್ನು ನಾವೇ ಮಾಡಿಕೊಳ್ಳಲು ಹಿಂದೂ ಕಾರ್ಯಕರ್ತರು ಮುಂದಾಗಬೇಕಾದ ಅನಿವಾರ್ಯತೆ ಸೃಷ್ಟಿಯಾಗಲಿದೆ ಎಂದರು.
ಪ್ರವೀಣ್ ಹತ್ಯೆ ಖಂಡಿಸಿ ತಿಪಟೂರು ಸ್ವಯಂಪ್ರೇರಿತ ಬಂದ್; ವಿಡಿಯೋ
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಸರ್ಕಾರವನ್ನು ನೆಚ್ಚಿಕೊಂಡು ಪ್ರತಿಭಟನೆ ಮಾಡುತ್ತಿಲ್ಲ. ನಮ್ಮ ರಕ್ಷಣೆಯನ್ನು ನಾವೇ ಮಾಡಿಕೊಳ್ಳಲಿದ್ದೇವೆ. ಅಮಾಯಕ ಕಾರ್ಯಕರ್ತರ ಹತ್ಯೆಗಳನ್ನು ಸರ್ಕಾರ ತಡೆಗಟ್ಟಲು ಮುಂದಾಗಬೇಕು ಎಂದು ಅವರು ಆಗ್ರಹಿಸಿದರು.
ಹುಸಿಯಾದ ‘ಕಠಿಣ ಕ್ರಮ’ದ ಭರವಸೆ; ತುಮಕೂರು ಬಿಜೆಪಿಯಲ್ಲಿ ರಾಜೀನಾಮೆ ಪರ್ವ
+ There are no comments
Add yours