Tumkurnews
ತುಮಕೂರು; ಪ್ರವೀಣ್ ಹತ್ಯೆ ಖಂಡಿಸಿ ಹಾಗೂ ಹಂತಕರನ್ನು ಬಂಧಿಸುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರ ರಾಜೀನಾಮೆ ಪರ್ವ ಮುಂದುವರೆದಿದ್ದು, ತುಮಕೂರು ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಜಿಲ್ಲಾ ಮತ್ತು ಮಂಡಲದ ಎಲ್ಲಾ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.
ಪ್ರವೀಣ್ ಹತ್ಯೆ ಖಂಡಿಸಿ ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿ ರಾಜೀನಾಮೆ
ಪಕ್ಷದ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಶಂಕರ್ ಅವರಿಗೆ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಜಿಲ್ಲಾ ಸಂಚಾಲಕ ವಿನಯ್ ಅದ್ವೈತ ನೇತೃತ್ವದಲ್ಲಿ ವಿವಿಧ ಪದಾಧಿಕಾರಿಗಳು ತಮ್ಮ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿ ಸರಕಾರದ ಕಠಿಣ ಕ್ರಮದ ಭರವಸೆ ಹುಸಿಯಾದ ಹಿನ್ನೆಲೆಯಲ್ಲಿ ರಾಜೀನಾಮೆ ಸಲ್ಲಿಸಿರುವುದಾಗಿ ವಿನಯ್ ಅದ್ವೈತ ತಿಳಿಸಿದ್ದಾರೆ.
(ಚಿತ್ರ; ವಿನಯ್ ಅದ್ವೈತ)
ಪ್ರವೀಣ್ ಹತ್ಯೆ; ಮತ್ತಿಬ್ಬರು ಬಿಜೆಪಿ ಮುಖಂಡರ ರಾಜೀನಾಮೆ
+ There are no comments
Add yours