ಪ್ರವೀಣ್ ಹತ್ಯೆ ಖಂಡಿಸಿ ತಿಪಟೂರು ಸ್ವಯಂಪ್ರೇರಿತ ಬಂದ್; ವಿಡಿಯೋ

1 min read

 

Tumkurnews
ತಿಪಟೂರು; ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಹಾಗೂ ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿರುವ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಹತ್ಯೆ ಖಂಡಿಸಿ ಶುಕ್ರವಾರ ತಿಪಟೂರು ಬಂದ್ ಆಚರಿಸಲಾಯಿತು.

ಹುಸಿಯಾದ ‘ಕಠಿಣ ಕ್ರಮ’ದ ಭರವಸೆ; ತುಮಕೂರು ಬಿಜೆಪಿಯಲ್ಲಿ ರಾಜೀನಾಮೆ ಪರ್ವ
ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕರೆ ನೀಡಿದ್ದ ಸ್ವಯಂ ಪ್ರೇರಿತ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಪಟ್ಟಣದ ಅಂಗಡಿ ಮುಂಗಟ್ಟುಗಳು ಸಂಪೂರ್ಣವಾಗಿ ಬಂದ್ ಆಗಿದ್ದವು.
ವ್ಯಾಪಾರ, ವಾಣಿಜ್ಯ ಚಟುವಟಿಕೆಗಳನ್ನು ಸ್ಥಗಿತಗೊಳಿಸಿ ವರ್ತಕರು ಬಂದ್ ಗೆ ಸಂಪೂರ್ಣ ಬೆಂಬಲ ಸೂಚಿಸಿದ್ದರು. ಆಟೊ, ಟ್ಯಾಕ್ಸಿ ಸೇರಿದಂತೆ ಸಾರ್ವಜನಿಕ ಸಾರಿಗೆಗಳು ಕೂಡ ಬಂದ್ ಆಚರಣೆಯಲ್ಲಿ ಪಾಲ್ಗೊಂಡವು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಓಡಾಟ ಕಂಡುಬರಲಿಲ್ಲ.

ಉದ್ಯೋಗಿನಿ ಯೋಜನೆ; 3 ಲಕ್ಷ ರೂ. ಸಾಲ, 1.50 ಲಕ್ಷ ರೂ. ಸಬ್ಸಿಡಿ! ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ
ಆಸ್ಪತ್ರೆ, ಮೆಡಿಕಲ್ ನಂತಹ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಶಾಲಾಕಾಲೇಜುಗಳು ರಜೆ ಘೋಷಿಸಿದ್ದವು. ಬಂದ್ ಮಾಹಿತಿ ಇಲ್ಲದ ಕೆಲವು ವಿದ್ಯಾರ್ಥಿಗಳು ಶಾಲೆಗೆ ಬಂದು ಬಳಿಕ ವಾಪಾಸ್ಸಾಗುತ್ತಿದ್ದ ದೃಶ್ಯಗಳು ಕಂಡು ಬಂದವು. ಬಂದ್ ವೇಳೆ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.

ತಿಪಟೂರು; ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ

You May Also Like

More From Author

+ There are no comments

Add yours