Tumkurnews
ತುಮಕೂರು; ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು,
ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಗೂಳೂರು ಕೆರೆ 23 ವರ್ಷಗಳ ಬಳಿಕ ಕೋಡಿ ಬಿದ್ದಿದೆ.
ಜಿಲ್ಲೆಯ ವಿವಿಧ ಕಡೆಗಳಲ್ಲಿ ಉತ್ತಮ ಮಳೆಯಿಂದಾಗಿ ಕೆರೆಗಳು ತುಂಬಿ ಕೋಡಿ ಬೀಳುತ್ತಿದ್ದು, ತುಮಕೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ಹತ್ತಾರು ಕೆರೆಗಳು ಕೋಡಿ ಬಿದ್ದಿವೆ. ಪ್ರಮುಖವಾಗಿ ಗೂಳೂರು ಕೆರೆ ಕೋಡಿ ಬಿದ್ದಿರುವುದು ಸ್ಥಳೀಯರ ಅಪಾರ ಸಂತಸಕ್ಕೆ ಕಾರಣವಾಗಿದೆ.
ಗೂಳೂರು ಕೆರೆ ಕೋಡಿ ಬಿದ್ದ ಹಿನ್ನೆಲೆಯಲ್ಲಿ ಶಾಸಕ ಡಿ.ಸಿ ಗೌರಿಶಂಕರ್ ಬಾಗಿನ ಅರ್ಪಿಸಿದರು. ಈ ವೇಳೆ ನೂರಾರು ಮಂದಿ ಗ್ರಾಮಸ್ಥರು ಹಾಜರಿದ್ದು, ಸಂಭ್ರಮಕ್ಕೆ ಸಾಕ್ಷಿಯಾದರು.




+ There are no comments
Add yours