Tumkurnews
ತುಮಕೂರು; ಬೀಳ್ಕೊಡುಗೆ ಸಮಾರಂಭದಲ್ಲಿ ವರ್ಗಾವಣೆಗೊಂಡ ಶಿಕ್ಷಕರನ್ನು ತಬ್ಬಿ ವಿದ್ಯಾರ್ಥಿನಿಯರು ಬಿಕ್ಕಿ ಬಿಕ್ಕಿ ಅತ್ತ ಘಟನೆ ನಡೆದಿದೆ.
ವ್ಯಾಪಕ ಮಳೆ; ಶಾಲೆಗಳಿಗೆ ರಜೆ ಘೋಷಿಸಲು ಡಿಸಿ ಸೂಚನೆ
ನಗರದ ಎಂಪ್ರೆಸ್ ಬಾಲಕಿಯರ ಪ್ರೌಢಶಾಲೆಯಲ್ಲಿ ಘಟನೆ ಸಂಭವಿಸಿದ್ದು, ಗುಬ್ಬಿ ತಾಲ್ಲೂಕು ಅಂಕಸಂದ್ರ ಪ್ರೌಢಶಾಲೆಯ ಮುಖ್ಯಶಿಕ್ಷಕರಾಗಿ ಮುಂಬಡ್ತಿ ಹೊಂದಿದ ಡಾ.ಎಸ್.ಕೃಷ್ಣಪ್ಪ ಅವರನ್ನು ತಬ್ಬಿ ವಿದ್ಯಾರ್ಥಿನಿಯರು ಅತ್ತಿದ್ದಾರೆ.
ಸದರಿ ಶಿಕ್ಷಕರು ಕನ್ನಡ ವಿಷಯವನ್ನು ಬೋಧಿಸುತ್ತಿದ್ದು, ವಿದ್ಯಾರ್ಥಿನಿಯರಿಗೆ ಅತ್ಯಂತ ಪ್ರೀತಿಪಾತ್ರರಾಗಿದ್ದರು. ಕಳೆದ 22 ವರ್ಷಗಳಿಂದ ನಗರದ ಎಂಪ್ರೆಸ್ ಶಾಲೆಯಲ್ಲಿ ಸೇವೆ ಸಲ್ಲಿಸಿದ್ದ ಡಾ.ಕೃಷ್ಣಪ್ಪ ಇತ್ತೀಚೆಗಷ್ಟೇ ಹಂಪಿ ವಿವಿಯಿಂದ ಪಿ.ಹೆಚ್.ಡಿ. ಪದವಿ ಪಡೆದಿದ್ದರು. ಅತ್ಯಂತ ಸರಳ ಹಾಗೂ ಪ್ರಾಮಾಣಿಕ ಶಿಕ್ಷಕರೆಂದು ಇಲಾಖೆಯಲ್ಲಿ ಗುರುತಿಸಿಕೊಂಡಿದ್ದ ಕೃಷ್ಣಪ್ಪ ಅವರಿಗೆ ಇತ್ತೀಚೆಗಷ್ಟೇ ಮುಂಬಡ್ತಿ ದೊರೆತಿದೆ. ಈ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಮಳೆಗೆ 4ನೇ ಬಲಿ; ಹಳ್ಳ ದಾಟುವಾಗ ಕೊಚ್ಚಿಹೋಗಿ ಶಿಕ್ಷಕ ಸಾವು ಶಾಲೆಯಿಂದ ಬೀಳ್ಕೊಡುವ ಸಂದರ್ಭದಲ್ಲಿ ಶಿಕ್ಷಕರನ್ನು ತಬ್ಬಿ, ತಡೆ ಹಿಡಿದ ವಿದ್ಯಾರ್ಥಿನಿಯರು, ನಮ್ಮ ಶಾಲೆ ಬಿಟ್ಟು ಹೋಗಬೇಡಿ ಸರ್ ಎಂದು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ವಿದ್ಯಾರ್ಥಿನಿಯರೊಂದಿಗೆ ಶಾಲೆಯ ಇತರೆ ಶಿಕ್ಷಕರು ಕೂಡ ಕಣ್ಣೀರು ಹಾಕಿದ್ದಾರೆ.
ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್!; ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ
+ There are no comments
Add yours