ಮುಖ್ಯಮಂತ್ರಿ ಬದಲಾವಣೆ ವಿಚಾರ; ಸುರೇಶ್ ಗೌಡ ಸ್ಪೋಟಕ ಹೇಳಿಕೆ

1 min read

 

Tumkurnews
ತುಮಕೂರು; ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಬಹುದು ಎಂಬ ಊಹಾಪೋಹಗಳು ಹಬ್ಬಿರುವ ಬೆನ್ನಲ್ಲೇ ಮಾಜಿ‌ ಶಾಸಕ ಬಿ.ಸುರೇಶ್ ಗೌಡ ಆಗಸ್ಟ್ 15ರ ಒಳಗಾಗಿ ಎಲ್ಲವೂ ಆಗಬಹುದು ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಸೇನೆ ಸೇರ ಬಯಸುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ; ಉಚಿತ ತರಬೇತಿಗೆ ಅರ್ಜಿ ಆಹ್ವಾನ
ಸಿಎಂ ಬದಲಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ‌ಅವರು, ಈಗಿರುವ ಮುಖ್ಯಮಂತ್ರಿ ಒಳ್ಳೆಯ ಕೆಲಸವನ್ನು ಮಾಡುತ್ತಿದ್ದಾರೆ. ಅವರ ಒಂದು ವರ್ಷದ ಅವಧಿಯಲ್ಲಿ ಕೆರೆ ಕಟ್ಟೆಗಳು ತುಂಬಿವೆ. ಆದರೇ ಪಕ್ಷ ಏನು ನಿರ್ಧಾರ ತೆಗೆದು ಕೊಳ್ಳುತ್ತದೆಯೋ ಅದಕ್ಕೆ ನಾವು ಬದ್ದರಾಗಿದ್ದೇವೆ ಎಂದು ತಿಳಿಸಿದರು.
ಶೋಭಾ ಕರಂದ್ಲಾಜೆ ಮುಖ್ಯಮಂತ್ರಿ ಆಗುತ್ತಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು ಆ ಬಗ್ಗೆ ನನಗೆ‌ ಗೊತ್ತಿಲ್ಲ. ನಾನು ಅವರನ್ನು ಭೇಟಿಯಾಗಿದ್ದೆ. ಅವರು ಅದರ ಬಗ್ಗೆ ಮಾತನಾಡಿಲ್ಲ. ಅದು ಮಾಧ್ಯಮದ ಸೃಷ್ಟಿ. ಆದರೆ ಅವರು ಮುಖ್ಯಮಂತ್ರಿ ಆದರೆ ಸಂತೋಷ ಎಂದರು.

(ಮಾಜಿ ಶಾಸಕ ಬಿ.ಸುರೇಶ್ ಗೌಡ ಸುದ್ದಿಗಾರರೊಂದಿಗೆ ಮಾತನಾಡಿದರು)

ತುಮಕೂರು- ಜೋಗ ಜಲಪಾತ; KSRTC ವಿಶೇಷ ಟೂರ್ ಪ್ಯಾಕೇಜ್ ಘೋಷಣೆ
ಬಿಜೆಪಿ ಪಕ್ಷವು ವಿಧಾನ ಸಭಾ ಚುನಾವಣೆ ಆರೇಳು ತಿಂಗಳುಗಳು ಇರಬೇಕಾದರೆಯೇ ಮುಖ್ಯಮಂತ್ರಿ ಬದಲಾವಣೆ ಮಾಡಿದ ಉದಾಹರಣೆ ಇದೆ. ಆಗಸ್ಟ್ 15ರ ಒಳಗೆ ಎಲ್ಲವೂ ಆಗಬಹುದು ಎನ್ನುವ ಅಭಿಪ್ರಾಯ ನನ್ನದು ಎಂದು ತಿಳಿಸಿದರು.
ಬಿಜೆಪಿ 2023ರಲ್ಲಿ ಪುನಃ ಅಧಿಕಾರ ಹಿಡಿಯುವ ಉದ್ದೇಶದಿಂದ ಪಕ್ಷದಲ್ಲಿ ಕೆಲವು ಬದಲಾವಣೆಗಳು ಆಗಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸ್ಥಾನಕ್ಕೆ ಕಂಟಕ ಬರುವ ಸಾಧ್ಯತೆಗಳನ್ನು ಪುಷ್ಟೀಕರಿಸಿದರು.

ವರ್ಗಾವಣೆಗೊಂಡ ಶಿಕ್ಷಕರನ್ನು ತಬ್ಬಿ ಬಿಕ್ಕಿ ಬಿಕ್ಕಿ ಅತ್ತ ವಿದ್ಯಾರ್ಥಿನಿಯರು

About The Author

You May Also Like

More From Author

+ There are no comments

Add yours