ಆ.13ರಂದು ಲೋಕ್ ಅದಾಲತ್; ಕೋರ್ಟ್ ಕೇಸುಗಳಲ್ಲಿ ರಾಜೀ ಮಾಡಿಕೊಳ್ಳಲು ಅವಕಾಶ

1 min read

 

Tumkurnews
ತುಮಕೂರು; ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಆಗಸ್ಟ್ 13ರಂದು ರಾಷ್ಟ್ರಿಯ ಲೋಕ್ ಅದಾಲತ್ ಆಯೋಜಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ತಿಳಿಸಿದರು.

ಅರುಂಧತಿ ಸಿನಿಮಾ ಪ್ರಭಾವ; ಬೆಂಕಿ ಹಚ್ಚಿಕೊಂಡಿದ್ದ ವಿದ್ಯಾರ್ಥಿ ಸಾವು
ಆಗಸ್ಟ್ 13 ರಂದು ನಡೆಯಲಿರುವ ರಾಷ್ಟ್ರೀಯ ಲೋಕ್ ಅದಾಲತ್ ಕುರಿತು ಮಾಹಿತಿ ನೀಡಲು ಜಿಲ್ಲಾ ನ್ಯಾಯಾಲಯದ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೋರ್ಟ್‍ಗಳಲ್ಲಿ ಶೀಘ್ರ ನ್ಯಾಯದಾನಕ್ಕೆ ಆದ್ಯತೆ ನೀಡಲಾಗುತ್ತಿದೆ‌. ಜನಸಾಮಾನ್ಯರಿಗೆ ಅತೀ ತ್ವರಿತಗತಿಯಲ್ಲಿ ಹಾಗೂ ವೆಚ್ಚವಿಲ್ಲದೆ ರಾಜೀ ಸಂಧಾನಗಳ ಮೂಲಕ ವ್ಯಾಜ್ಯ ಇತ್ಯರ್ಥಗೊಳಿಸಿ ನ್ಯಾಯ ದೊರಕಿಸಲು ಜನತಾ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ, ಈ ಉದ್ದೇಶದಿಂದ ರಾಜ್ಯ ಕಾನೂನು ಸೇವಾ ಪ್ರಾಧಿಕಾರದಿಂದ ರಾಷ್ಟ್ರೀಯ ಲೋಕ್ ಅದಾಲತ್‍ನ್ನು ಆಗಸ್ಟ್ 13 ರಂದು ನಡೆಸಲು ಉದ್ದೇಶಿಸಲಾಗಿದೆ ಎಂದರು.

KSRTC; ತುಮಕೂರು ವಿಭಾಗಕ್ಕೆ ಒಂದೇ ದಿನ 1 ಕೋಟಿ ಆದಾಯ!

ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಎಲ್ಲಾ ರೀತಿಯ ರಾಜೀಯಾಗಬಹುದಾದ ವ್ಯಾಜ್ಯಪೂರ್ವ ಪ್ರಕರಣಗಳಾದ ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಹಾಗೂ ಇತರೆ ಸಿವಿಲ್ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ನ್ಯಾಯಾಧೀಶರ ಭೇಟಿ
ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ಮೋಟಾರು ಅಪಘಾತ ಪರಿಹಾರ ನ್ಯಾಯಾಧಿಕರಣದ ಪ್ರಕರಣಗಳು, ವೈವಾಹಿಕ, ಕುಟುಂಬ ನ್ಯಾಯಾಲಯ ಪ್ರಕರಣಗಳು( ವಿಚ್ಚೇದನ ಪ್ರಕರಣ ಹೊರತುಪಡಿಸಿ), ಭೂಸ್ವಾಧಿನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು (ಜಿಲ್ಲಾ ಹಾಗೂ ಉಚ್ಚ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ಮಾತ್ರ) ಸಿವಿಲ್ ಪ್ರಕರಣಗಳು(ಬಾಡಿಗೆ, ಅನುಭೊಗದ ಹಕ್ಕುಗಳು ನಿರ್ಬಂಧಕಾಜ್ಞೆ ದಾವೆಗಳು ಹಾಗೂ ಇತರೆ ದಾವೆಗಳು) ಇತ್ಯರ್ಥಪಡಿಸಲಾಗುತ್ತದೆ. ಎಂದು ವಿವರಿಸಿದರು.

KSRTC ನಿಲ್ದಾಣದಲ್ಲಿ ನಿಲ್ಲದ ಕಳ್ಳರ ಹಾವಳಿ; ಇಂದು ಒಂದೇ ದಿನ 1.50 ಲಕ್ಷ ರೂ. ಪಿಕ್ ಪಾಕೆಟ್!
ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳು ಮತ್ತು ಖಾಯಂ ಜನತಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ. ಲೋಕ್ ಅದಾಲತ್ ಮೂಲಕ ಪ್ರಕರಣಗಳನ್ನು ಜನತಾ ನ್ಯಾಯಾಲಯದ ಮೂಲಕ ಶೀಘ್ರವಾಗಿ ಇತ್ಯರ್ಥಗೊಳಿಸಬಹುದಲ್ಲದೆ ಖುದ್ದಾಗಿ ಅಥವಾ ವಕೀಲರ ಮುಖಾಂತರ ಭಾಗವಹಿಸಬಹುದು. ಯಾವುದೇ ರೀತಿಯ ಮೇಲ್ಮನವಿಗೆ ಅವಕಾಶವಿರುವುದಿಲ್ಲ. ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಮಾರ್ಗದರ್ಶನ ನೀಡಲಾಗುವುದಲ್ಲದೇ ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯ ಉಳಿದು ವಿವಾದವು ಸುಖಾಂತ್ಯಗೊಳಿಸಲಾಗುವುದು ಎಂದು ತಿಳಿಸಿದರು.

ಮಕ್ಕಳಿಗೆ ಚಿತ್ರಕಲೆ ಮತ್ತು ದೇಶಭಕ್ತಿ ಗೀತೆ ಸ್ಪರ್ಧೆ; ಇಂದೇ ನೋಂದಾಯಿಸಿ
ರಾಜೀ ಸಂಧಾನದ ಮೂಲಕ ಪ್ರಕರಣವನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು, ಲೋಕ್ ಅದಾಲತ್ ಮೂಲಕ ಕಡಿಮೆ ಖರ್ಚಿನಲ್ಲಿ ಶೀಘ್ರ ನ್ಯಾಯದಾನ ನೀಡುವುದು ಸಾರ್ವಜನಿಕರಿಗೆ ಹೆಚ್ಚು ಸಹಕಾರಿಯಾಗಿರುವುದರಿಂದ ಪ್ರಕರಣಗಳನ್ನು ಇತ್ಯರ್ಥಗೊಳಿಸಿಕೊಳ್ಳುವಂತೆ ಅವರು ಮನವಿ ಮಾಡಿದರು.

ಆಗಸ್ಟ್ 11ರಿಂದ 17ರವರೆಗೆ ದೇಶದ ಪ್ರತಿ‌ ಮನೆಯಲ್ಲೂ ರಾಷ್ಟ್ರದ್ವಜಾರೋಹಣಕ್ಕೆ ಕೇಂದ್ರ ಕರೆ; ಜಿಲ್ಲೆಯಲ್ಲಿ ಸಿದ್ಧತೆ ಆರಂಭ

About The Author

You May Also Like

More From Author

+ There are no comments

Add yours