ಮಕ್ಕಳಿಗೆ ಚಿತ್ರಕಲೆ ಮತ್ತು ದೇಶಭಕ್ತಿ ಗೀತೆ ಸ್ಪರ್ಧೆ; ಇಂದೇ ನೋಂದಾಯಿಸಿ

1 min read

ಮಕ್ಕಳಿಗೆ ಚಿತ್ರಕಲೆ ಮತ್ತು ದೇಶಭಕ್ತಿ ಗೀತೆ ಸ್ಪರ್ಧೆ
Tumkurnews
ತುಮಕೂರು; ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಜಿಲ್ಲಾ ಬಾಲಭವನ ಸಮಿತಿ(ರಿ), ತುಮಕೂರು ಇಲ್ಲಿ ಆಗಸ್ಟ್ 15 ರಂದು ಮಧ್ಯಾಹ್ನ 12 ಗಂಟೆಗೆ 05-16 ವರ್ಷದೊಳಗಿನ ಮಕ್ಕಳಿಗೆ ಚಿತ್ರಕಲೆ ಮತ್ತು ದೇಶಭಕ್ತಿ ಗೀತೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

ಆಗಸ್ಟ್ 12ರಿಂದ 25ರ ವರೆಗೆ ನಿಷೇದಾಜ್ಞೆ; ಉಲ್ಲಂಘಿಸಿದರೆ ಬಂಧಿಸಲು ಡಿಸಿ ಆದೇಶ
ಸ್ಪರ್ಧೆಗಳಲ್ಲಿ ಭಾಗವಹಿಸಲಿಚ್ಚಿಸುವ ಮಕ್ಕಳ ಪೋಷಕರು ಆಗಸ್ಟ್ 13ರಂದು ಸಂಜೆ 5.30 ಗಂಟೆಯೊಳಗೆ ಜಿಲ್ಲಾ ಬಾಲಭವನ ಕಚೇರಿ, ಮಹಾತ್ಮಗಾಂಧಿ ರಸ್ತೆ, ತುಮಕೂರು ಇಲ್ಲಿ ತಮ್ಮ ಮಕ್ಕಳ ಹೆಸರನ್ನು ನೋಂದಾಯಿಸಿ -ಕೊಳ್ಳಬಹುದಾಗಿದೆ.

75ನೇ ಸ್ವಾತಂತ್ರೋತ್ಸವ; ಜಿಲ್ಲಾಧಿಕಾರಿ ನೇತೃತ್ವದಲ್ಲಿ ಪೂರ್ವಭಾವಿ ಸಭೆ

ಕಾರ್ಯಕ್ರಮದಲ್ಲಿ 100 ಮಕ್ಕಳು ಮಾತ್ರ ಭಾಗವಹಿಸಲು ಅವಕಾಶವಿರುವುದರಿಂದ ಮೊದಲು ನೋಂದಾಯಿಸಿಕೊಂಡವರಿಗೆ ಮಾತ್ರ ಆದ್ಯತೆ ನೀಡಲಾಗುವುದು. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 9901890079, 9008982260ಯನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

KSRTC; ತುಮಕೂರು ವಿಭಾಗಕ್ಕೆ ಒಂದೇ ದಿನ 1 ಕೋಟಿ ಆದಾಯ!

About The Author

You May Also Like

More From Author

+ There are no comments

Add yours